This is the title of the web page
This is the title of the web page

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಶರ್ಮಿಳಾ ಕಾಂಗ್ರೆಸ್​ ಸೇರ್ಪಡೆ

ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಸಮ್ಮುಖದಲ್ಲಿ ಶರ್ಮಿಳಾ ಕಾಂಗ್ರೆಸ್​ ಸೇರ್ಪಡೆ

 

ನವದೆಹಲಿ: YSR ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್ ಶರ್ಮಿಳಾ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಸಮ್ಮುಖದಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ರಾಷ್ಟ್ರ ರಾಜಧಾನಿ ನವದೆಹಲಿಗೆ ಆಗಮಿಸಿದ್ದ ಶರ್ಮಿಳಾ ಅವರು ಕಾಂಗ್ರೆಸ್ ಪಕ್ಷದ ವರಿಷ್ಠರನ್ನು ಭೇಟಿಯಾಗಿ ಕೆಲ ಕಾಲ ಚರ್ಚೆ ನಡೆಸಿದರು. ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು ಇದಕ್ಕಿಂತ ಮುಂಚೆ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಹೀಗಾಗಿ ತೆಲಂಗಾಣದ ‘ಲೋಕ’ಸಮರದ ಅಖಾಡದಲ್ಲಿ ಶರ್ಮಿಳಾ ಅವರು ಕಣಕ್ಕೆ ಇಳಿಯುತ್ತಾರೆ ಎಂದು ಹೇಳಲಾಗುತ್ತಿದೆ.

ಕಾಂಗ್ರೆಸ್​ಗೆ ಶರ್ಮಿಳಾ ಸೇರಿದ್ದರಿಂದ ವೈಎಸ್​ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಪಕ್ಷದಲ್ಲಿ ವಿಲೀನಗೊಳಿಸಿದ್ದಾರೆ. ರಾಹುಲ್ ಗಾಂಧಿಯವರನ್ನು ಪ್ರಧಾನಿ ಸ್ಥಾನದಲ್ಲಿ ನೋಡುವುದು ನನ್ನ ತಂದೆಯ ಕನಸಾಗಿತ್ತು. ಹೀಗಾಗಿ ಅದಕ್ಕೆ ಕೊಡುಗೆ ನೀಡಲು ಸಂತಸವಾಗುತ್ತಿದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿನ ಭಾಗವಾಗಿದ್ದಕ್ಕೆ ನನಗೆ ಹೆಮ್ಮೆ ಎನಿಸುತ್ತಿದೆ ಎಂದು ಎಂದು ವೈಎಸ್ ಶರ್ಮಿಳಾ ಹೇಳಿದ್ದಾರೆ.