This is the title of the web page
This is the title of the web page

ನಿರಂತರ ಮಳೆಯಿಂದ  24 ಮನೆಗಳಿಗೆ ಹಾನಿ  ಹಾಗೂ ಹೊನ್ನಾಪುರದಲ್ಲಿ 1 ಜಾನುವಾರ ಸಾವು

ನಿರಂತರ ಮಳೆಯಿಂದ  24 ಮನೆಗಳಿಗೆ ಹಾನಿ  ಹಾಗೂ ಹೊನ್ನಾಪುರದಲ್ಲಿ 1 ಜಾನುವಾರ ಸಾವು
ಧಾರವಾಡ  ಜು.23: ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವದರಿಂದ ಜುಲೈ 23 ರ ಬೆಳಿಗ್ಗೆ  8 ಗಂಟೆಯವರೆಗೆ ಜಿಲ್ಲೆಯ ವಿವಿಧ ತಾಲೂಕಿನ ಗ್ರಾಮಗಳಲ್ಲಿನ ಸುಮಾರು 24 ಮನೆಗಳಿಗೆ ಹಾನಿ ಆಗಿದ್ದು, ಗೊಡೆ ಕುಸಿದು 1 ಜಾನುವಾರ ಜೀವ ಹಾನಿ ಆಗಿದೆ ಎಂದು ಜಿಲ್ಲಾಡಳಿತದ ಪ್ರಕಟಣೆ ತಿಳಿಸಿದೆ.
ನಿರಂತರ ಮಳೆಯಿಂದಾಗಿ ಧಾರವಾಡ  ತಾಲೂಕಿನಲ್ಲಿ 2,
 ಹುಬ್ಬಳ್ಳಿ  ಗ್ರಾಮೀಣ ತಾಲೂಕಿನಲ್ಲಿ  1,  ಅಳ್ನಾವರ  ತಾಲೂಕಿನಲ್ಲಿ 2, ಹುಬ್ಬಳ್ಳಿ ಶಹರ ತಾಲೂಕಿನಲ್ಲಿ  2, ಕುಂದಗೋಳ ತಾಲೂಕಿನಲ್ಲಿ 6, ಅಣ್ಣಿಗೇರಿ ತಾಲೂಕಿನಲ್ಲಿ 5, ನವಲಗುಂದ ತಾಲೂಕಿನಲ್ಲಿ 3 ಮತ್ತು  ಕಲಘಟಗಿ  ತಾಲೂಕಿನಲ್ಲಿ 1 ತೀವ್ರತರ ಹಾಗೂ 2 ಭಾಗಶಃ ಸೇರಿದಂತೆ ಒಟ್ಟು 5 ಮನೆಗಳು ಒಳಗೊಂಡಂತೆ ಜಿಲ್ಲೆಯ ಎಂಟು ತಾಲೂಕುಗಳಲ್ಲಿ 24 ಮನೆಗಳು ಭಾಗಶಃ ಹಾನಿಯಾದ ವರದಿ ಆಗಿದೆ.
ನಿನ್ನೆ ರಾತ್ರಿಯಿಂದ ಸುರಿದ ನಿರಂತರ ಮಳೆಯಿಂದಾಗಿ ಅಳ್ನಾವರ ತಾಲೂಕಿನ ಹೊನ್ನಾಪುರ ಗಾಮದ ಸಿದ್ದಪ್ಪ ಭೀಮಪ್ಪ ನಾಯ್ಕ ಅವರ ದನದ ಕೊಟ್ಟಿಗೆ ಕುಸಿದು ಅವರ 1 ಎಮ್ಮೆ ಜಾನುವಾರ ಜೀವ ಹಾನಿ ಆಗಿದೆ.
 ಈ ಎಲ್ಲ ಪ್ರಕರಣಗಳ ಕುರಿತು ಗ್ರಾಮ ಅಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ತಹಸಿಲ್ದಾರರಿಗೆ ಪ್ರಾಥಮಿಕ ವರದಿ ಸಲ್ಲಿಸಿದ್ದಾರೆ.  ತನಿಖಾ ತಂಡದಿಂದ ಪರಿಶೀಲನೆ ಕಾರ್ಯ ಜರುಗಿಸಿ, ಅರ್ಹ ಫಲಾನುಭವಿಗಳಿಗೆ ಪರಿಹಾರ ವಿತರಿಸುವಲ್ಲಿ ಸರ್ಕಾರದ ನಿಯಮಾವಳಿಗಳಂತೆ ಅಗತ್ಯ ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ತಿಳಿಸಿದ್ದಾರೆ.
*ಜುಲೈ 23 ರ ಬೆಳಿಗ್ಗೆ 8-30ರ ವರೆಗಿನ ಮಳೆ ವರದಿ:* ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿಗಳಲ್ಲಿ ಇವತ್ತಿನವರೆಗೂ ಸರಾಸರಿಗಿಂತ ಹೆಚ್ಚು ಮಳೆ ಆಗಿದ್ದು, ಕಳೆದ 8-10 ದಿನಗಳಿಂದ ನಿರಂತರವಾಗಿ ಮಳೆ ಆಗುತ್ತಿದ್ದು, ಅಲ್ಲಲ್ಲಿ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ.