ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲು ಕ್ರಮ: ಸಚಿವ ಜಿ.ಪರಮೇಶ್ವರ

ಬೆಳಗಾವಿ ಸುವರ್ಣವಿಧಾನಸೌಧ ಡಿ.: ದರೋಡೆ, ಕಳ್ಳತನ ಮತ್ತು ಸುಲಿಗೆ ಪ್ರಕರಣಗಳನ್ನು ಹತ್ತಿಕ್ಕಲು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯ ಕ್ರಮಗಳನ್ನು ಮತ್ತಷ್ಟು ಬಿಗಿಗೊಳಿಸಲಾಗುವುದು ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ಅವರು ಹೇಳಿದರು.

ಪರಿಷತ್ತಿನಲ್ಲಿ ಡಿ.11ರಂದು ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸಲು ಹಾಗೂ ಬಾಕಿ ಇರುವ ಪ್ರಕರಣಗಳನ್ನು ಪತ್ತೆ ಹಚ್ಚಲು ನಾನಾ ಕ್ರಮ ತೆಗೆದುಕೊಳ್ಳಲಾಗಿದೆ.

ವಾಹನ ಕಳವು ಪ್ರಕರಣಗಳನ್ನು ನಿಯಂತ್ರಿಸುವ ಉದ್ದೇಶದಿಂದ, ಸಂಘಟಿತ ವಾಹನ ಕಳವು ಅಪರಾಧಗಳಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಲಂ 111 ಅನ್ನು ಅಳವಡಿಸಿ ನಿಯಮಾನುಸಾರ ಅಗತ್ಯವಾದ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಈ ಕ್ರಮದ ಮೂಲಕ ಸಂಘಟಿತ ಅಪರಾಧ ಚಟುವಟಿಕೆಗಳಿಗೆ ಅಡ್ಡಿ ಉಂಟಾಗುವಂತೆ ಹಾಗೂ ವಾಹನ ಕಳವು ಪ್ರಕರಣಗಳ ಪತ್ತೆ ಮತ್ತು ತಡೆಗಟ್ಟುವಿಕೆಯಲ್ಲಿ ಪರಿಣಾಮಕಾರಿ ಕ್ರಮ ಜರುಗುವಂತೆ ನೋಡಿಕೊಳ್ಳಲಾಗಿದೆ.

ಆರೋಪಿಗಳಿಗೆ ಸುಲಭವಾಗಿ ಜಾಮೀನು ದೊರೆಯದಂತೆ ಕಠಿಣ ಕಾನೂನು ಕ್ರಮ ಕೈಗೆತ್ತಿಕೊಳ್ಳಲಾಗಿದ್ದು, ಆರೋಪಿಗಳ ಮೇಲಿನ ನಿಗಾವನ್ನು ಮತ್ತಷ್ಟು ಬಲಪಡಿಸಲಾಗಿದೆ.

ಕಳವು ಪ್ರಕರಣಗಳನ್ನು ನಿಯಂತ್ರಿಸಲು ರಾತ್ರಿ ರೌಂಡ್ ಹಾಗೂ ರಸ್ತೆ ಗಸ್ತು ಕರ್ತವ್ಯವನ್ನು ಬಿಗಿಗೊಳಿಸಿ, ಠಾಣಾ ವ್ಯಾಪ್ತಿಯಲ್ಲಿ ಸಂಶಯಾಸ್ಪದ ವ್ಯಕ್ತಿಗಳು, ಕಂಡುಬಂದಲ್ಲಿ ಅಂತಹವರ ವಿಚಾರಣೆಯನ್ನು ನಡೆಸಿ ಸೂಕ್ತ ಕ್ರಮವನ್ನು ಕೈಗೊಳ್ಳುವಂತೆ ಅಧಿಕಾರಿ ಸಿಬ್ಬಂದಿಯವರಿಗೆ ಸೂಚಿಸಲಾಗಿದೆ.

ಡೋರ್ ಲಾಕ್ ಹೌಸ್‍ಗಳಿದ್ದಲ್ಲಿ ಅಂತಹ ಮನೆಗಳ ಕುರಿತು ಠಾಣೆಯಲ್ಲಿ ಮಾಹಿತಿಯನ್ನು ಸಂಗ್ರಹಿಸಿ, ಠಾಣಾ ವ್ಯಾಪ್ತಿಯ ಮನೆಗಳಲ್ಲಿ ಸಾರ್ವಜನಿಕರು ಹೆಚ್ಚಿನ ದಿನಗಳು ಮನೆಗೆ ಬೀಗ ಹಾಕಿ ಹೋಗುವ ಸಮಯದಲ್ಲಿ ಸ್ಥಳೀಯ ಪೆÇಲೀಸ್ ಠಾಣೆಗಳಿಗೆ ಮಾಹಿತಿಯನ್ನು ನೀಡುವ ಕುರಿತು ಜಾಗೃತಿ ಕಾರ್ಯಕ್ರಮವನ್ನು ಕೈಗೊಳ್ಳಲಾಗುತ್ತಿದೆ.

ಗಸ್ತು ವಾಹನಗಳ ಹಾಗೂ ಹೊಯ್ಸಳ ವಾಹನದ ಅಧಿಕಾರಿಗಳು ರೌಂಡ್ಸ್ ಕರ್ತವ್ಯದಲ್ಲಿರುವ ಸಮಯದಲ್ಲಿ ಡೋರ್ ಲಾಕ್ ಹೌಸ್‍ಗಳ ಮೇಲೆ ನಿಗಾಯಿಟ್ಟು, ಸದರಿ ಪ್ರದೇಶದಲ್ಲಿ ಓಡಾಡುವ ಸಂಶಯಾಸ್ಪದ ವ್ಯಕ್ತಿಗಳ ವಿಚಾರಣೆಯನ್ನು ನಡೆಸಿ ಅಪರಾಧಗಳ ಪತ್ತೆ ಬಗ್ಗೆ ಕ್ರಮ ವಹಿಸಲಾಗುತ್ತಿದೆ.

ವಾಹನ ಕಳವು ಪ್ರಕರಣಗಳು ನಡೆಯದಂತೆ ತಡೆಗಟ್ಟಲು ಹಾಗೂ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲು ಸಾರ್ವಜನಿಕರಲ್ಲಿ ವಾಹನಗಳನ್ನು ಪಾಕಿರ್ಂಗ್ ಸ್ಥಳಗಳಲ್ಲಿ ನಿಲ್ಲಿಸುವ ಸಮಯದಲ್ಲಿ ಸರಿಯಾಗಿ ಹ್ಯಾಂಡ್ ಲಾಕ್ ಮಾಡುವಂತೆ ಅರಿವು ಮೂಡಿಸುವ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ.

ಠಾಣಾ ವ್ಯಾಪ್ತಿಯಲ್ಲಿ ಸ್ವತ್ತು ಕಳವು ಪ್ರಕರಣವು ಹೆಚ್ಚಾಗಿ ವರದಿಯಾಗುವ ಸ್ಥಳಗಳನ್ನು ಗುರುತಿಸಿ ರಾತ್ರಿ ಪಾಳೆಯ ಕರ್ತವ್ಯದ ಅಧಿಕಾರಿಗಳು ಹಾಗೂ ರಾತ್ರಿ ಗಸ್ತು ಕರ್ತವ್ಯದ ಸಿಬ್ಬಂದಿಗಳು ಪದೇ ಪದೇ ಭೇಟಿ ಮಾಡಿ ಪರಿಶೀಲನೆಯನ್ನು ನಡೆಸಲಾಗುತ್ತಿದೆ. ಠಾಣೆಯಲ್ಲಿ ಅಪರಾಧ ವಿಭಾಗದ ಸಿಬ್ಬಂದಿಗಳನ್ನು ಕಳವು ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿರುವ ಸ್ಥಳಗಳಲ್ಲಿ ರಾತ್ರಿ ತೆರಳಿ (ಲಾಕಿರ್ಂಗ್) ಗಸ್ತು ಕರ್ತವ್ಯಕ್ಕೆ ನಿಯೋಜಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು.

ಇದೇ ಸಂದರ್ಭದಲ್ಲಿ ಸಚಿವರು ರಾಜ್ಯದಲ್ಲಿ ಕಳೆದ 3 ವರ್ಷಗಳಲ್ಲಿ ದಾಖಲಾಗಿರುವ ಪ್ರಕರಣಗಳ ವಿವರವನ್ನ ಸದನದ ಗಮನಕ್ಕೆ ತಂದರು.
********