ಬೀದರ್: ಅಕ್ರಮವಾಗಿ ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಸಾಗಾಟ ಮಾಡುತ್ತಿದ್ದ 150 ಕೆಜಿ ಗಾಂಜಾ ಜಪ್ತಿ ಮಾಡಿ, ಮೂವರು ಗಾಂಜಾಕೋರರನ್ನು ಬಂಧಿಸುವಲ್ಲಿ ಬೀದರ್ ಪೊಲೀಸರು ಬಂಧಿಸಿದ್ದಾರೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಎಕಂಬಾ ಚೆಕ್ ಪೋಸ್ಟ್ನಲ್ಲಿ 1 ಕೋಟಿ 50 ಲಕ್ಷ ರೂ. ಬೆಲೆ ಬಾಳುವ 130 ಕೆಜಿ ಗಾಂಜಾ ಜಪ್ತಿ ಮಾಡಲಾಗಿದೆ. ಬೀದರ್ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಪೊಲೀಸರು 20 ಕೆಜಿ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ತೆಲಂಗಾಣದಿಂದ ಬೀದರ್ಗೆ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿ ಹುಮ್ನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.