This is the title of the web page
This is the title of the web page

11 ತಿಂಗಳ ಹಸುಗೂಸು, 4 ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ಆತ್ಮಹತ್ಯೆ; ಶವಕ್ಕಾಗಿ ಹುಡುಕಾಟ

11 ತಿಂಗಳ ಹಸುಗೂಸು, 4 ವರ್ಷದ ಹೆಣ್ಣು ಮಗುವಿನೊಂದಿಗೆ ತಾಯಿ ಆತ್ಮಹತ್ಯೆ; ಶವಕ್ಕಾಗಿ ಹುಡುಕಾಟ

 

ತುಮಕೂರು: ಪತಿ ಸಾವು, ಮಗುವಿನ ಕಾಯಿಲೆಯಿಂದ ಜೀವನದಲ್ಲಿ ಜಿಗುಪ್ಸೆಗೊಂದು 11 ತಿಂಗಳ ಹಸುಗೂಸು, 4 ವರ್ಷದ ಹೆಣ್ಣು ಮಗುವಿನ ಜೊತೆ ತಾಯಿಯು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರೋವ ಘಟನೆ ಗುಬ್ಬಿಯಲ್ಲಿ ನಡೆದಿದೆ. ತಾಯಿ ನಿರ್ಧಾರಕ್ಕೆ ಗ್ರಾಮಸ್ಥರ ಶೋಕ ವ್ಯಕ್ತಪಡಿಸಿದ್ದಾರೆ.

ಗುಬ್ಬಿ ತಾಲೂಕಿನ ನಿಟ್ಟೂರು ಕೆರೆಯಲ್ಲಿ ತಾಯಿ, ಮಕ್ಕಳ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಅವರೆಲ್ಲ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಅಗ್ನಿಶಾಮಕ ಸಿಬ್ಬಂದಿ ಕೆರೆಯಲ್ಲಿ ಹುಡುಕಾಟ ನಡೆಸಿದ್ದಾರೆ.

ವಿಜಯಲಕ್ಷ್ಮಿ ಅವರು ನನ್ನ ಸಾವಿಗೆ ನಾನೇ ಕಾರಣವೆಂದು ಡೆತ್ ನೋಟ್ ಬರೆದಿಟ್ಟು ಕೆರೆಗೆ ಹಾರಿದ್ದಾರೆ. ಒಂದು ವರ್ಷದ ಹಿಂದೆ ಪತಿ‌ ನವೀನ್ ಅನಾರೋಗ್ಯದಿಂದ‌ ಸಾವನ್ನಪ್ಪಿದ್ದ. ಈಗ 11 ತಿಂಗಳ ಮಗುವಿಗೂ ಶ್ವಾಸಕೋಶದ ಸಂಬಂಧಿ ಕಾಯಿಲೆ ಇದೆ. ಲಕ್ಷಾಂತರ ರೂಪಾಯಿ ಖರ್ಚು ಮಾಡಿದರೂ ವಾಸಿಯಾಗಿರಲಿಲ್ಲ. ಇದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಶರಣಾಗುತ್ತಿದ್ದೇನೆ ಎಂದು ವಿಜಯಲಕ್ಷ್ಮಿ ಅವರು ಡೆತ್‌ನೋಟ್‌ನಲ್ಲಿ ಬರೆದಿದ್ದಾರೆ.