ಬೆಂಗಳೂರು: ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ವಿಚಾರ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾನಾ ಸಮುದಾಯಗಳ ನಿರೀಕ್ಷೆಯಂತೆ ಪ್ರಾತಿನಿಧ್ಯ ನೀಡುವುದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಈ ದೃಷ್ಟಿಯಿಂದ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಸೂಕ್ತ ಎಂದ ಅವರು, ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಮುಖಂಡರು ಕೂಡ ಚುನಾವಣೆ ದೃಷ್ಟಿಯಿಂದ ಡಿಸಿಎಂ ಆಗಬೇಕು ಎಂದು ಚರ್ಚೆ ನಡೆಸಿದ್ದೇನೆ ಎಂದರು.
ನಾನಾ ಸಮುದಾಯಗಳ ನಿರೀಕ್ಷೆಯಂತೆ ಪ್ರಾತಿನಿಧ್ಯ ನೀಡುವುದರಿಂದ ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಅನುಕೂಲವಾಗಲಿದೆ. ಈ ದೃಷ್ಟಿಯಿಂದ ಹೆಚ್ಚುವರಿ ಡಿಸಿಎಂ ಹುದ್ದೆಗಳ ಸೃಷ್ಟಿ ಸೂಕ್ತ ಎಂದ ಅವರು, ಹಿಂದುಳಿದ ವರ್ಗದ ಹಾಗೂ ಅಲ್ಪಸಂಖ್ಯಾತ ಮುಖಂಡರು ಕೂಡ ಚುನಾವಣೆ ದೃಷ್ಟಿಯಿಂದ ಡಿಸಿಎಂ ಆಗಬೇಕು ಎಂದು ಚರ್ಚೆ ನಡೆಸಿದ್ದೇನೆ ಎಂದರು.
ಡಿನ್ನರ್ ಮೀಟಿಂಗ್ ನಲ್ಲಿ ಲೋಕಸಭಾ ಚುನಾವಣೆ, ಪಕ್ಷ ಸಂಘಟನೆ, ಕಾರ್ಯಕರ್ತರಿಗೆ ಪಕ್ಷದಲ್ಲಿ ಪ್ರಾಮುಖ್ಯತೆ ಸಿಗಬೇಕೆಂದು ಚರ್ಚೆ ಮಾಡಿದ್ದೇವೆ. ಇದೇ 28ರಂದು ಚಿತ್ರದುರ್ಗದಲ್ಲಿ ಶೋಷಿತರ ಸಮಾವೇಶ ನಡೆಯಲಿದೆ. ದಾವರಗೆಯಲ್ಲಿಯೂ ಫೆಬ್ರುವರಿಯಲ್ಲಿ ಎಸ್ಸಿ, ಎಸ್ಟಿ ಸಮಾವೇಶ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಎಸ್ಸಿ, ಎಸ್ಟಿ ಸಮಾವೇಶ ಮಾಡುವ ಕುರಿತು ಇನ್ನು ದಿನಾಂಕ ನಿಗದಿ ಮಾಡಿಲ್ಲ. ಜಾತಿಗಣತಿ ಬಗ್ಗೆ ಚರ್ಚಿಸಿಲ್ಲ ಎಂದು ತಿಳಿಸಿದರು.
ಕರ ಸೇವಕರ ಬಂಧನ ಮಾಡಿ ಎಂದು ಪ್ರತಿಭಟಿಸುತ್ತಿರುವ ಬಿಜೆಪಿ ಹೋರಾಟ ರಾಜಕೀಯ ಪ್ರೇರಿತ. ಅದಕ್ಕೆ ಸಂಬಧಿಸಿದ ಆರೋಪಿಗಳು ನ್ಯಾಯಾಲಯದ ಆದೇಶದಂತೆ ನಡೆದುಕೊಳ್ಳಬೇಕು. ಕಾಂಗ್ರೆಸ್ ಅಥವಾ ಬಿಜೆಪಿ ಇಂತಹ ವಿಷಯ ಬಗ್ಗೆ ಎನೂ ಮಾಡಲಿಕ್ಕೆ ಆಗಲ್ಲ ಎಂದ ಅವರು, ಡಿನ್ನರ್ ಮೀಟಿಂಗ್ ನಲ್ಲಿ ದಲಿತ ಸಿಎಂ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲವೆಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.