This is the title of the web page
This is the title of the web page

40 ಸಾವಿರ ಲಂಚ: ಪಿಎಸ್‌ಐ , ಪೇದೆ ಇಬ್ಬರು ಲೋಕಾಯುಕ್ತ ಬಲೆಗೆ

40 ಸಾವಿರ ಲಂಚ: ಪಿಎಸ್‌ಐ , ಪೇದೆ ಇಬ್ಬರು ಲೋಕಾಯುಕ್ತ ಬಲೆಗೆ

 

ರಾಣೆಬೆನ್ನೂರು: ವ್ಯಕ್ತಿಯೊಬ್ಬರಿಂದ ಮನೆ ಬಾಡಿಗೆ ವಸೂಲಿ ಮಾಡಿಕೊಡಲು 40 ಸಾವಿರ ಲಂಚ ಪಡೆಯುತ್ತಿದ್ದಾಗ ಇಲ್ಲಿನ ಅಶೋಕನಗರ ಠಾಣೆ ಪಿಎಸ್‌ಐ ಮತ್ತು ಕಾನ್‌ಸ್ಟೆಬಲ್‌ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಪಿಎಸ್‌ಐ ಸುನೀಲ ತೇಲಿ, ವಾಹನ ಚಾಲಕ ಹಾಗೂ ಕಾನ್‌ಸ್ಟೆಬಲ್‌ ಸಚಿನ್‌ ಓಲೇಕಾರ ಸಿಕ್ಕಿಬಿದ್ದವರು.

ಇವರ ಜೊತೆಗೆ ಉಡುಪಿ ಟಿಸ್ಟಾಲ್‌ ಮಾಲೀಕ ಸಂತೋಷ್‌ ಶೆಟ್ಟಿ ಅವರನ್ನು ಲೋಕಾಯುಕ್ತ ಬಂಧಿಸಿದ್ದು, ಕೋರ್ಟ್‌ಗೆ ಹಾಜರುಪಡಿಸಿದ್ದಾರೆ.

ದೂರುದಾರ ಸಿದ್ಧೇಶ್ವರ ನಗರದ ಅಫ್ರೋಜ್‌ ಅಹ್ಮದ್‌ ನೂರ ಅಹ್ಮದ್‌ಸಾಬ್‌ ಊದಗಟ್ಟಿ ಅವರಿಗೆ ಅಣ್ಣನ ಪತ್ನಿ ರೌನಕ್‌ ಖಾನ್‌ ಅವರೊಂದಿಗೆ ಮನೆ ಬಾಡಿಗೆ ವಿಚಾರದಲ್ಲಿ ವಿವಾದವಿತ್ತು. ರೌನಕ್‌ ರಾಣೆಬೆನ್ನೂರು ಠಾಣೆಯಲ್ಲಿ ದೂರು ನೀಡಿದ್ದರು.