This is the title of the web page
This is the title of the web page

ಸಾಲ ಆರೋಪದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ದ ​ 420 ಕೇಸ್​ ದಾಖಲು

ಸಾಲ ಆರೋಪದ ಶಾಸಕ ರಮೇಶ್ ಜಾರಕಿಹೊಳಿ ವಿರುದ್ದ ​ 420 ಕೇಸ್​ ದಾಖಲು

 

ಬೆಂಗಳೂರು: ಚಾಮರಾಜಪೇಟೆಯ ಕರ್ನಾಟಕ ರಾಜ್ಯ ಸಹಕಾರಿ ಅಪೇಕ್ಸ್ ಬ್ಯಾಂಕ್​ನಿಂದ 2013 ರಿಂದ 2017ರವರೆಗೆ 232 ಕೋಟಿ 88 ಲಕ್ಷ ರೂ.ಗಳ ಸಾಲ ಮಂಜೂರು ಮಾಡಲಾಗಿತ್ತು. ಇದನ್ನು ವಾಪಸ್ ಮಾಡದ ಹಿನ್ನೆಲೆಯಲ್ಲಿ 2023ರ ವೇಳೆಗೆ 439 ಕೋಟಿ 7 ಲಕ್ಷ ರೂ.ಗಳ ಸಾಲದ ಮೊತ್ತ ಬಾಕಿ ಉಳಿದುಕೊಂಡಿದೆ.

ಬ್ಯಾಂಕ್​ಗೆ ಸಾಲ ಮರು ಪಾವತಿ ಮಾಡದೆ, ಮೋಸ ಮಾಡುವ ಉದ್ದೇಶದಿಂದ ಯಾವುದೇ ಮಾಹಿತಿ ನೀಡದೆ ಆಡಳಿತ ಮಂಡಳಿ ಹುದ್ದೆಗಳಿಂದ ಹೊರ ಬಂದಿದ್ದಾರೆ. ಈ ಮೂಲಕ ಬ್ಯಾಂಕ್​ನವರಿಗೆ ನಂಬಿಕೆ ದ್ರೋಹ ಮಾಡಿದ್ದಾರೆಂದು ಆರೋಪಿಸಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಕೇಸ್ ಹಾಕಿದ್ದಾರೆ.

ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಅನ್ನೋರು ಪ್ರಕರಣ ದಾಖಲಿಸಿದ್ದು, ಐಪಿಸಿ ಸೆಕ್ಷನ್​ 420 ಕೇಸ್​ನಲ್ಲಿ ಜಾರಕಿಹೊಳಿ A1 ಆಗಿದ್ದಾರೆ.

ಬೆಳಗಾವಿಯ ಗೋಕಾಕ್​ನ ಶುಗರ್ ಫ್ಯಾಕ್ಟರಿಯಾದ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್ ಕಂಪನಿ ಹೆಸರಲ್ಲಿ ಕಾರ್ಖಾನೆಯನ್ನು ಸ್ಥಾಪನೆ ಹಾಗೂ ವಿಸ್ತರಣೆ ನಿರ್ವಹಣೆಗಾಗಿ ಸಾಲ ಪಡೆದಿದ್ದರು. ಮಾಜಿ ಸಚಿವ ಹಾಗೂ ಗೋಕಾಕ್ ಶಾಸಕ ರಮೇಶ್ ಜಾರಕಿಹೋಳಿ, ವಸಂತ್ ವಿ.ಪಾಟೀಲ್, ಶಂಕರ್ ಪವಾಡೆ ಹಾಗೂ ಸೌಭಾಗ್ಯಲಕ್ಷ್ಮಿ ಶುಗರ್ಸ್ ಲಿಮಿಟೆಡ್​ನ ಇಬ್ಬರು ಪದಾಧಿಕಾರಿಗಳ ವಿರುದ್ಧ ವಿವಿಪುರಂ ಪೊಲೀಸ್​ ಠಾಣೆಯಲ್ಲಿ ಎಫ್​​ಐಆರ್ ದಾಖಲು ಮಾಡಲಾಗಿದೆ.