ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ 

ರಾಜ್ಯದಲ್ಲಿ ಇನ್ನೂ 5 ದಿನ ಭಾರಿ ಮಳೆ; ಹವಾಮಾನ ಇಲಾಖೆ 

 

ಬೆಂಗಳೂರು:ಮುಂದಿನ ವಾರಗಳಲ್ಲಿ ‌ರಾಜ್ಯದಲ್ಲಿ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಇನ್ನೂ ಐದು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಇನ್ನೂ ಐದು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದಿರುವ ಹವಾಮಾನ ಇಲಾಖೆ, ಕರಾವಳಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಚ್ಚರಿಕೆ ನೀಡಿದೆ.