This is the title of the web page
This is the title of the web page

ಕಾಂಗ್ರೆಸ್ ಈ ಬಾರಿ ಲಿಂಗಾಯತರಿಗೆ ಹೆಚ್ಚು ಟಿಕೆಟ್ ನೀಡುವ ಸಾಧ್ಯತೆ : ಶಾಸಕ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

ಕಾಂಗ್ರೆಸ್ ಈ ಬಾರಿ ಲಿಂಗಾಯತರಿಗೆ ಹೆಚ್ಚು ಟಿಕೆಟ್ ನೀಡುವ ಸಾಧ್ಯತೆ : ಶಾಸಕ ಶಾಮನೂರು ಶಿವಶಂಕರಪ್ಪ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ

 

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಲಿಂಗಾಯತ ಸಮುದಾಯವು ಬಿಜೆಪಿಯ ಹಿಂದೆ ಗಟ್ಟಿಯಾಗಿಲ್ಲ, ಲಿಂಗಾಯತ ಸಮುದಾಯವು ಈ ಬಾರಿ ಬಿಜೆಪಿಯಿಂದ ದೂರ ಸರಿಯೋ ಸಾಧ್ಯತೆ ಹೆಚ್ಚು ಆದ್ದರಿಂದ ಉತ್ತರ ಕರ್ನಾಟಕದಲ್ಲಿ ಈ ಬಾರಿ ಬಿಜೆಪಿಗೆ ಬಹಳ ಕಷ್ಟಕರವಾಗಲಿದೆ ಎಂದು ಕೆಲವು ಬಿಜೆಪಿ ನಾಯಕರು ಮಾತನಾಡಿಕೊಳ್ಳುತ್ತಾರೆ ಅದಕ್ಕಾಗಿ ಕಾಂಗ್ರೆಸ್ ಉತ್ತರ ಕರ್ನಾಟಕದಲ್ಲಿ ಲಿಂಗಾಯತರ ಮತಗಳನ್ನು ಸೆಳೆಯಲು ಹೆಚ್ಚು ಪ್ರಯತ್ನ ಮಾಡುತ್ತದೆ.

ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಾರಿ ಪ್ರಯತ್ನ ಮುಂದುವರೆದಿದೆ ಒಂದು ವೇಳೆ ಕಾಂಗ್ರೆಸ್ ಏನಾದರು ಉತ್ತರ ಕರ್ನಾಟಕದಲ್ಲಿ ಹೆಚ್ಚಿನ ಸ್ನಾನ ಗೆದ್ದುಕೊಂಡರೆ ಕಾಂಗ್ರೆಸ್ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗೆಲ್ಲುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ  ಮುಂಬರುವ ವಿಧಾನಸಭೆ ಚುನಾವಣೆಗಾಗಿ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು  ಪ್ರಕಟಿಸುವ ನಿರೀಕ್ಷೆಯಿದ್ದು, ಪಕ್ಷದ ಲಿಂಗಾಯತ ಮುಖಂಡರಾದ ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಮತ್ತು ಶಾಸಕ ಶಾಮನೂರು ಶಿವಶಂಕರಪ್ಪ ಮತ್ತು ಪಿಸಿಸಿ ಮಾಜಿ ಅಧ್ಯಕ್ಷ ಅಲ್ಲಂ ವೀರಭದ್ರಪ್ಪ ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿ, ಸಮುದಾಯದ ನಾಯಕರಿಗೆ ಹೆಚ್ಚಿನ ಟಿಕೆಟ್ ನೀಡುವಂತೆ ಒತ್ತಾಯಿಸಿದ್ದಾರೆ.

ಕರ್ನಾಟಕದಲ್ಲಿ ಶೇಕಡಾ 16 ರಷ್ಟು ಲಿಂಗಾಯತ ಮತದಾರರಿದ್ದಾರೆ. ದಕ್ಷಿಣ ಕರ್ನಾಟಕದ ಸುಮಾರು 100 ಕ್ಷೇತ್ರಗಳಲ್ಲಿ ಉತ್ತಮ ಪ್ರಾತಿನಿಧ್ಯಕ್ಕಾಗಿ ಅವರು ಕಸರತ್ತು ನಡೆಸುತ್ತಿದ್ದಾರೆ ಮತ್ತು ಈ ಪ್ರದೇಶದಲ್ಲಿ ಕನಿಷ್ಠ 10 ಸ್ಥಾನಗಳನ್ನು ಕೇಳುತ್ತಿದ್ದಾರೆ. ಮುಖಂಡರ ಮಾತುಗಳನ್ನು ಆಲಿಸಿರುವ ಖರ್ಗೆ ಸ್ಕ್ರೀನಿಂಗ್ ಕಮಿಟಿಯು ಪಟ್ಟಿ ಸಿದ್ಧಪಡಿಸುವವರೆಗೆ ಕಾದು ನಂತರ ಸಲಹೆಗಳನ್ನು ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಅಖಿಲ ಭಾರತ ವೀರಶೈವ ಮಹಾಸಭಾ ಕಾರ್ಯದರ್ಶಿ ರೇಣುಕಾ ಪ್ರಸನ್ನ ಮಾತನಾಡಿ, ಹೆಚ್ಚಿನ ಸ್ಥಾನ ಗೆಲ್ಲಬೇಕಾದರೆ ಲಿಂಗಾಯತ ಮತಗಳು ಬೇಕು ಎಂಬುದನ್ನು ಕಾಂಗ್ರೆಸ್ ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.