ಬೆಳಗಾವಿ, ಮಾ: ಸೂಕ್ತ ದಾಖಲಾತಿಗಳಲ್ಲದೇ ಸಾಗಿಸಲಾಗುತ್ತಿದ್ದ 9 ಲಕ್ಷ ರೂಪಾಯಿ ನಗದು ಹಣವನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ಮಂಗಳವಾರ(ಮಾ.21) ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಬೆಳಗಾವಿ ನಗರದಿಂದ ಅಂಕಲಗಿ ಕಡೆಗೆ ಹೊರಟಿದ್ದ ಕಾರನ್ನು ಕಣಬರಗಿ ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ.
ನಗದು ಹಣವು ಖಾಸಗಿ ಫೈನಾನ್ಸ್ ಕಂಪನಿಗೆ ಸೇರಿದೆ. ಆದರೆ ಸದರಿ ಹಣಕ್ಕೆ ಸಂಬಂಧಿಸಿದಂತೆ ಸಮರ್ಪಕ ದಾಖಲೆಗಳನ್ನು ಅವರು ಒದಗಿಸಿರುವುದಿಲ್ಲ. ಇದಲ್ಲದೇ ಹಣ ಸಾಗಾಣಿಕೆಗೆ ಸಂಬಂಧಿಸಿದಂತೆ ಇರುವ ನಿಗದಿತ ಎಸ್.ಓ.ಪಿ.ಯನ್ನು ಕೂಡ ಪಾಲಿಸದಿರುವುದು ಕಂಡುಬಂದಿದೆ.
ಸದರಿ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು, ನಿಯಮಾವಳಿ ಪ್ರಕಾರ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಚೆಕ್ ಪೋಸ್ಟ್ ನಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ತಂಡದ ಕೆಲಸಕ್ಕೆ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
***