This is the title of the web page
This is the title of the web page

ಪತ್ರಕರ್ತರಿಗೂ ಹಾಗೂ ಉಪಸಂಪಾದಕರಿಗೆ ಮತ್ತು ಸಿಬ್ಬಂದಿಯವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಮೂಲಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ

ಪತ್ರಕರ್ತರಿಗೂ ಹಾಗೂ ಉಪಸಂಪಾದಕರಿಗೆ ಮತ್ತು ಸಿಬ್ಬಂದಿಯವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಬೆಳಗಾವಿ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಮೂಲಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ

 

ಬೆಳಗಾವಿ: ಪತ್ರಕರ್ತರಿಗೂ ಪತ್ರಕರ್ತರಿಗೂ ಹಾಗೂ ಉಪಸಂಪಾದಕರಿಗೆ ಮತ್ತು ಸಿಬ್ಬಂದಿಯವರಿಗೆ ಅಂಚೆ ಮೂಲಕ ಮತದಾನ ಮಾಡಲು ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಸೋಮವಾರ ಬೆಳಗಾವಿ ಪತ್ರಕರ್ತರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ಮೂಲಕ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮನವಿ ಸಲ್ಲಿಸಿದರು.

ಪತ್ರಕರ್ತರು ಸರ್ಕಾರ ಮತ್ತು ಸಮಾಜದ ನಡುವಿನ ಸೇತುವೆ ಅಷ್ಟೇ ಆಗದೆ, ಸದೃಢ ಹಾಗೂ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವಲ್ಲಿ ಪ್ರತಿದಿನವೂ ಶ್ರಮಿಸುತ್ತಿದ್ದಾರೆ. ಆದರೆ ಚುನಾವಣೆ ಸಮಯದಲ್ಲಿ ಮತದಾನದಿಂದ ವಂಚಿತರಾಗುವಂತಾಗಿದೆ. ಪತ್ರಕರ್ತರು ತಮ್ಮ ಮೂಲ ಜಿಲ್ಲೆ ಹಾಗೂ ಕ್ಷೇತ್ರ ಹೊರತುಪಡಿಸಿ ಬೇರೆ ಬೇರೆ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ( ಉದಾ: ಮೂಲತಃ ಬೆಳಗಾವಿ ಜಿಲ್ಲೆಯ ಪತ್ರಕರ್ತ ಬೆಂಗಳೂರಿನಲ್ಲಿ, ಮೂಲತಃ ಮೈಸೂರಿನ ಪತ್ರಕರ್ತರು ರಾಯಚೂರು, ಯಾದಗಿರಿ ಸೇರಿದಂತೆ ಇನ್ನೀತರ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ).
ಇದರಿಂದಾಗಿ ಪತ್ರಕರ್ತರು ಮತದಾನದಿಂದ ವಂಚಿತಾಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ. ಮತದಾನದಿಂದ ವಂಚಿತರಾಗಬಾರದು ಹಾಗೂ ತಮ್ಮ ಹಕ್ಕು ಚಲಾಯಿಸುವ ನಿಟ್ಟಿನಲ್ಲಿ ಸರ್ಕಾರ, ಖಾಸಗಿ, ಅರೇ ಸರ್ಕಾರಿ, ಸರ್ಕಾರಿ ಉದ್ಯೋಗಿಗಳಿಗೆ ಮತದಾನದ ದಿನದಂತ ವೇತನ ಸಹಿತ ರಜೆ ಘೋಷಣೆ ಮಾಡಲಾಗುತ್ತದೆ. ಆದರೆ ಮತದಾನದ ದಿನದಂತೆ ಪತ್ರಕರ್ತರು ಹೆಚ್ಚು ಕಾರ್ಯನಿರ್ವಹಿಸುವ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ ಬಹು ಸಂಖ್ಯೆಯಲ್ಲಿ ಪತ್ರಕರ್ತರು ತಮ್ಮ ಜಿಲ್ಲೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ಇದರಿಂದಾಗಿ ಪತ್ರಕರ್ತರು ಮತದಾನ ಅಥವಾ ತಮ್ಮ ಹಕ್ಕು ಚಲಾಯಿಸುವಲ್ಲಿ ವಂಚಿತರಾಗುವ ಅನಿವಾರ್ಯ ಪರಿಸ್ಥಿತಿ ಎದುರಾಗಿದೆ.
ಆದ್ದರಿಂದ ಪತ್ರಕರ್ತರನ್ನು ಮತದಾನದಿಂದ ವಂಚಿತವಾಗದ ರೀತಿಯಲ್ಲಿ ಅಗತ್ಯ ಕ್ರಮಕೈಗೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ತಮ್ಮ ಮೂಲ ಜಿಲ್ಲೆ ಅಥವಾ ತಾಲೂಕು ಹೊರತು ಪಡಿಸಿ ಬೇರೆ ಬೇರೆ ರಾಜ್ಯ, ಜಿಲ್ಲೆ ಹಾಗೂ ತಾಲೂಕುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ಅಂಚೆ ಮೂಲಕ ಮತದಾನ ಮಾಡಲು ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡರು
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಮಹೇಶ್ ವಿಜಾಪುರ, ಸುನಿಲ್ ಪಾಟೀಲ್, ‌ಜಗದೀಶ ವಿರಕ್ತಮಠ, ಸುರೇಶ್ ನೇರ್ಲಿ, ಇಮಾಮಹುಸೇನ್ ಗೂಡನವರ, ವಿವೇಕ ಪೂಜಾರಿ ಸೇರಿದಂತೆ ಇತರರು ಇದ್ದರು.