ಮೈಸೂರು: ಮೋದಿಯಂತಹ ಸ್ಟಾರ್ ನಟರ ಕೈಯಲ್ಲೇ ಅಟ್ರಾಕ್ಷನ್ ಮಾಡೋಕೆ ಆಗ್ತಿಲ್ಲ. ಅಂಥದ್ರಲ್ಲಿ ಸುದೀಪ್ ಏನು ಮಾಡುತ್ತಾರೆ ನೋಡೋಣ ಬನ್ನಿ ಎಂದು ಲೇವಡಿ ಮಾಡಿದರು. ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಮೈತ್ರಿಯಾಗಿದೆ, ಹೀಗಾಗಿ ವರುಣ ಕ್ಷೇತ್ರದಲ್ಲಿ ಬಿಜೆಪಿ ಸಮರ್ಥ ಅಭ್ಯರ್ಥಿಯನ್ನು ಹಾಕುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.
ಪಿರಿಯಾಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಬಿಜೆಪಿ-ಜೆಡಿಎಸ್ ನಡುವೆ ಒಳ ಒಪ್ಪಂದವಲ್ಲ. ಕಾಂಗ್ರೆಸ್-ಬಿಜೆಪಿ ನಡುವೆ ಒಳ ಒಪ್ಪಂದ ಆಗಿದೆ.ಬಿಜೆಪಿ ಅಥವಾ ಕಾಂಗ್ರೆಸ್ ಜತೆ ಸೇರಿ ಮೈತ್ರಿ ಸರ್ಕಾರ ರಚಿಸುವ ಇಚ್ಛೆ ಇಲ್ಲ ರಾಜ್ಯಾದ್ಯಂತ ಪಂಚರತ್ನ ಯಾತ್ರೆ ವೇಳೆ ಭಾಗವಹಿಸುತ್ತಿರುವ ಜನಸ್ತೋಮ ನೋಡಿದರೆ ಈ ಬಾರಿ ರಾಜ್ಯದ ಜನತೆ ಬಹುಮತ ನೀಡುವ ವಿಶ್ವಾಸವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಪಿ
ಬಿಜೆಪಿಯಿಂದ ಅಲ್ಪಸಂಖ್ಯಾತರಿಗೆ ರಾಜ್ಯದಲ್ಲಿ ರಕ್ಷಣೆ ಇಲ್ಲದಂತಾಗಿದೆ, ಅವರು ಅಧಿಕಾರಕ್ಕೆ ಬರಲು ನೇರ ಕಾರಣ ಕಾಂಗ್ರೆಸ್ನವರಾಗಿದ್ದು, ಪ್ರಮುಖವಾಗಿ ಮೈಸೂರಿನ ನಾಯಕನ ಕುತಂತ್ರದಿಂದ ಮೈತ್ರಿ ಸರ್ಕಾರ ಪತನವಾಯಿತು ಎಂದು ಸಿದ್ದರಾಮಯ್ಯ ಅವರ ಹೆಸರು ಹೇಳದೆ ಪರೋಕ್ಷವಾಗಿ ಟಾಂಗ್ ನೀಡಿದರು. ದೇವೇಗೌಡರ ಕುಟುಂಬಕ್ಕೆ ನಿಷ್ಠವಾಗಿರುವುದರಲ್ಲಿ ಪಿರಿಯಾಪಟ್ಟಣ ತಾಲೂಕು ಮೊದಲ ಸ್ಥಾನದಲ್ಲಿದೆ, ಇಂತಹ ಪ್ರಾಮಾಣಿಕ ಮುಖಂಡರು ಮತ್ತು ದೇವೇಗೌಡರನ್ನು ಇಷ್ಟಪಡುವ ಲಕ್ಷಾಂತರ ಕಾರ್ಯಕರ್ತರು ಪಿರಿಯಾಪಟ್ಟಣದಲ್ಲಿದ್ದು, ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸಬೇಕು ಎಂದು ಮನವಿ ಮಾಡಿದರು.