ಬೆಂಗಳೂರು: ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ಹೆಂಡತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಿಲಿಕಾನ್ ಸಿಟಿಯ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಯುವತಿ ನಿರ್ಧಾರಕ್ಕೆ ತರಾಟೆ ತೆಗೆದುಕೊಂಡಿದ್ದಾರೆ.
ನಂದಿನಿ(24) ಎಂಬಾಕೆಯೇ ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಾಕೆ. ಸೊಣ್ಣಪ್ಪ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಆರು ವರ್ಷದ ಹಿಂದೆ ಗೌತಮ್ ಜೊತೆ ನಂದಿನಿ ಲವ್ ಮ್ಯಾರೇಜ್ ಆಗಿದ್ದಳು. ಇವರಿಬ್ಬರ ಪ್ರೀತಿಗೆ ಸಾಕ್ಷಿಯಾಗಿ ಇಬ್ಬರು ಮಕ್ಕಳು ಸಹ ಇದ್ದಾರೆ.