ಬೆಳಗಾವಿ: ಮಗುವಿನ ಮೇಲೆ ಬಸ್ ಹರಿದು ಪರಿಣಾಮ ತೀವ್ರ ರಕ್ತಸ್ರಾವದಿಂದ ಮಗು ಉಸಿರು ಚೆಲ್ಲಿರುವ ಘಟನೆ ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ.
ಶ್ಲೋಕ ಅಶೋಕ ತುಳಸಿಗೇರಿ (2) ಮೃತ ಬಾಲಕ. ಮಗು ರಸ್ತೆ ದಾಟುವಾಗ ಏಕಾಏಕಿ ಬಂದ್ ಬಸ್ ಮಗುವಿನ ಮೇಲೆ ಹರಿದಿದೆ. ಗಂಭೀರಗಾಯಗಳಾದರಿಂದ ಮಗು ತೀವ್ರನೊವಿನಿಂದ ಬಲಳಿ ಮೃತಪಟ್ಟಿದೆ.
ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಸಂಭವಿಸಿದೆ ಎಂದು ಸ್ಥಳೀಯರು ಸರ್ಕಾರಿ ಬಸ್ ನ ಗಾಜುಗಳನ್ನು ಪುಡಿಪುಡಿ ಮಾಡಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
ಕುಡಚಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.