ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ರಂಗೇರಿದ್ದು, ಅಖಾಡಕ್ಕೆ ದುಮ್ಮಕ್ಕಿರುಳುವ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿವೆ.
ಈ ಮಧ್ಯೆ ಬಿ ಎನ್ ಚಂದ್ರಪ್ಪ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರನ್ನಾಗಿ ಕಾಂಗ್ರೆಸ್ ನೇಮಿಸಿದೆ.
ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ಬಿ ಎನ್ ಚಂದ್ರಪ್ಪ ಅವರನ್ನು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರು ನೇಮಕ ಮಾಡಿದ್ದಾರೆ ಎಂದು ಕಾಂಗ್ರೆಸ್ ಪ್ರಕಟಣೆಯಲ್ಲಿ ತಿಳಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಆರ್ ಧ್ರುವನಾರಾಯಣ ಅವರು ಹೃದಯಾಘಾತದಿಂದ ಮಾರ್ಚ್ 11 ರಂದು ನಿಧನರಾಗಿದ್ದಾರೆ. ಅವರ ಸ್ಥಾನಕ್ಕೆ ಚಿತ್ರದುರ್ಗದ ಮಾಜಿ ಸಂಸದ ಬಿ ಎನ್ ಚಂದ್ರಪ್ಪ ಅವರನ್ನು ನೇಮಕ ಮಾಡಲಾಗಿದೆ.