ಬೆಂಗಳೂರು: ಆಡಳಿತಾರೂಢ ಬಿಜೆಪಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಸಂಜೆ ಅಥವಾ ನಾಳೆ ಬೆಳ್ಳಿಗ್ಗೆ ಬಿಡುಗಡೆ ಮಾಡುವ ಸಾಧ್ಯತೆಯಿದ್ದು, ಟಿಕೆಟ್ ಆಕಾಂಕ್ಷಿಗಳಿಗೆ ಇವಾಗಿನಿಂದಲೇ ಚಳಿ ಜ್ವರ್ ಶುರುವಾಗಿದೆ.
ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಚುನಾವಣಾ ವೇಳಾಪಟ್ಟಿ ಪ್ರಕಟವಾಗಿದ್ದರೂ, ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಬಹು ಆಕಾಂಕ್ಷಿಗಳಿರುವ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಆಡಳಿತಾರೂಢ ಬಿಜೆಪಿ ಸಭೆಯ ಮೇಲೆ ಸಭೆ ನಡೆಸುತ್ತಿದೆ.
ಕಳೆದ ತಿಂಗಳಾಂತ್ಯದಲ್ಲಿ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ್ದ ಆಪ್ ಕಾಂಗ್ರೆಸ್ ಇದೀಗ 60 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ನಾಳೆ ಬಿಡುಗಡೆ ಮಾಡಿ ಮೂರನೇಯ ಪಟ್ಟಿಗೆ ಸಿದ್ಧವಾಗಿದೆ.
ಈ ಮಧ್ಯೆ, ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲು ಕಾಯುತ್ತಿರುವ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಪಟ್ಟಿಯನ್ನು ವಿಳಂಬ ಮಾಡುತ್ತಿವೆ ಎಂದು ತಿಳಿದುಬಂದಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಟಿಕೆಟ್ ಪಡೆಯಲು ವಿಫಲವಾದ ಅತೃಪ್ತ ಬಿಜೆಪಿ ನಾಯಕರಿಗೆ ಟಿಕೆಟ್ ನೀಡುವ ಮೂಲಕ ಬಿಜೆಪಿಯಲ್ಲಿನ ಅಸಮಾಧಾನವನ್ನು ಹೆಚ್ಚು ಮಾಡಲು ಆಶಿಸುತ್ತಿವೆ. ಅದರ ಕಡೆಯಿಂದ, ಬಿಜೆಪಿ ಕೂಡ ತಮ್ಮ ಪಕ್ಷದ ಟಿಕೆಟ್ ಹಂಚಿಕೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡೆಗಳನ್ನು ನಿರೀಕ್ಷಿಸುತ್ತಿದೆ.