ನವದೆಹಲಿ, ಏ 10:ಕರ್ನಾಟಕದಲ್ಲಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಬರಲಿರುವ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ. ಕಾಂಗ್ರೆಸ್ ಮಾತ್ರವೇ ಕರ್ನಾಟಕಕ್ಕೆ ಪರ್ಯಾಯ ಪಕ್ಷವಾಗಿದ್ದು, ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ಕಾವು ಹೆಚ್ಚಾಗುತ್ತಿದೆ. ಈ ಸಂಬಂಧ ಪ್ರಕಟಗೊಂಡ ಚುನಾವಣಾ ಪೂರ್ವ ಕೆಲವು ಸಮೀಕ್ಷೆಗಳು ಸಹ ಕಾಂಗ್ರೆಸ್‌ಗೆ ಮುನ್ನಡೆ ಆಗಬಹುದು ಎಂದು ತಿಳಿಸಿವೆ. ಇದರ ಬೆನ್ನಲ್ಲೆ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ತಾವೇ ಅಧಿಕಾರ ಹಿಡಿಯುವುದಾಗಿ ಭವಿಷ್ಯ ನುಡಿಯುತ್ತಿದ್ದಾರೆ. ಜೊತೆಗೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕರ್ನಾಟಕದಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷವು ಮತ್ತೆ ಅಧಿಕಾರಕ್ಕೆ ಬರುವುದಿಲ್ಲ. ಸದರಿ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವೇ ರಾಜ್ಯಕ್ಕೆ ಪರ್ಯಾಯ ಆಗಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಕಾಂಗ್ರೆಸ್‌ನ ಕರ್ನಾಟಕ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಭಾನುವಾರ ಹೇಳಿದರು.
ನವದೆಹಲಿಯಲ್ಲಿ ಸುರ್ಜೆವಾಲ ಸೇರಿದಂತೆ ಕಾಂಗ್ರೆಸ್ ಕೆಲವು ನಾಯಕರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಿವಾಸದಲ್ಲಿ ಭಾನುವಾರ ಸಭೆ ನಡೆಸಿದರು. ಸಭೆಯ ನಂತರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಸುರ್ಜೆವಾಲ ಅವರು, ಇಂದಿನ ಸಭೆಯಲ್ಲಿ ಕರ್ನಾಟಕ ರಾಜ್ಯದ ಸಾರ್ವತ್ರಿಕ ಚುನಾವಣೆಯ ಅಭ್ಯರ್ಥಿಗಳು, ಸ್ಥಾನ ಗಳಿಕೆಗೆ ತಂತ್ರಗಳ ಕುರಿತು ಚರ್ಚೆ ನಡೆದಿದೆ ಎಂದರು
ಹಗರಣಗಳಿಂದ ಯುವ ಭವಿಷ್ಯಕ್ಕೆ ಅಪಾಯ
ಪ್ರಸ್ತುತ ಬಿಜೆಪಿ ಸರ್ಕಾರದ ಅಡಿಯಲ್ಲಿ ಕರ್ನಾಟಕದಲ್ಲಿ ನಡೆದ ಹಗರಣಗಳಿಂದ ಯುವಕರ ಭವಿಷ್ಯವು ಅಪಾಯದಲ್ಲಿದೆ. ಅವರೆಗಲ್ಲ ಕಾಂಗ್ರೆಸ್ ಪಕ್ಷವೇ ಭರವಸೆಯ ಆಶಾಕಿರಣವಾಗಿದೆ. ರಾಜ್ಯದಲ್ಲಿ ಇತ್ತೀಚಿನ ಹಗರಣಗಳಾದ ಪಿಎಸ್‌ಐ ನೇಮಕಾತಿ ಹಗರಣಗಳು, ಬ್ಯಾಂಕ್ ನೇಮಕಾತಿ ಹಗರಣಗಳು, ಜೂನಿಯರ್ ಇಂಜಿನಿಯರ್ ಹಗರಣಗಳು, ಸಹಾಯಕ ಪ್ರಾಧ್ಯಾಪಕ ಹಗರಣ ಸೇರಿದಂತೆ ಇನ್ನಿತರ ಪ್ರಕರಣಗಳು ರಾಜ್ಯದ ಯವಕರ ಭವಿಷ್ಯದ ಮೇಲೆ ದುಷ್ಪರಿಣಾಮ ಭೀರಿದೆ ಎಂದು ಬಿಜೆಪಿ ಆಡಳಿತ ವಿರುದ್ಧ ಕಿಡಿ ಕಾರಿದರು.