ಬೆಳಗಾವಿ : ರಾಜ್ಯದಲ್ಲಿ ಬದಲಾವಣೆ ಗಾಳಿ ಬಿಸಿದ್ದು, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ತರಲು ನಿಮ್ಮೇಲ್ಲರ ಶ್ರಮಿಸಬೇಕು ಎಂದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.
ರಾಜ್ಯದಲ್ಲಿ ಎರಡನೇ ಅತಿ ಹೆಚ್ಚು ವಿಧಾನಸಭಾ ಮತಕ್ಷೇತ್ರ ಹೊಂದಿರುವ ಬೆಳಗಾವಿಯ 18 ಕ್ಷೇತ್ರದಲ್ಲಿ ಕಾಂಗ್ರೆಸ್ 15ರಲ್ಲಿ ಗೆಲುವು ಸಾಧಿಸಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಜಿಲ್ಲೆ ಸೇರಿದಂತೆ ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ವಾತಾವರಣ, ಗಾಳಿ ಬಿಸುತ್ತಿದೆ. ಬಿಜೆಪಿ ವಿರುದ್ಧವಾದ ಅಲೆ ಇದೆ. ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತ, ಜನ ಬೇಸರ ಇದೆ.
ನಗರದ ಕಾಂಗ್ರೆಸ್ ಭವನದ ಆವರಣದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಯವರು ಸಿದ್ದಪಡಿಸಿದ ನೂತನ ಪ್ರಚಾರದ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು,
ಈ ವಾಹನವನ್ನು ಸತೀಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯಲ್ಲಿ ಪ್ರಚಾರಕ್ಕೆ ಬಳಸಲಿದ್ದಾರೆ. ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಂಕಾ ಗಾಂಧಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ನಾನು ಕೂಡ ಈ ವಾಹನವನ್ನು ಬೆಳಗಾವಿಗೆ ಬಂದಗಾ ಪ್ರಚಾರಕ್ಕಾಗಿ ಬಳಸಲಿದ್ದೇನೆ ಎಂದು ತಿಳಿಸಿದರು.
ಕಳೆದ ಚುನಾವಣೆಯಲ್ಲಿ 6 ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಆದರೆ ಈ ಭಾರೀ ಕಾಂಗ್ರೆಸ್ ಪರ ಅಲೆ ಇದೆ. ಹೀಗಾಗಿ ಬೆಳಗಾವಿಯಲ್ಲಿ 15 ಸೀಟು ನಾವು ಗೆಲುವು ಸಾಧಿಸಲಿದ್ದೇವೆ, ಬಿಜೆಪಿ ಮಾಡಿರುವ ಭ್ರಷ್ಟಾಚಾರ, ದುರಾಡಳಿತ, ಜನ ವಿರೋಧಿ ನೀತಿಯಿಂದ ಜನರು ಬೇಸತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಟುನಾದನ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಕೆಪಿಸಿಸಿ ಕಾರ್ಯದರ್ಶಿ ಸುನೀಲ್ ಹಣಮನ್ನವರ್, ಕಾಂಗ್ರೆಸ್ ನಗರ ಅಧ್ಯಕ್ಷ ರಾಜು ಸೇಠ್, ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷ್ಮಣರಾವ್ ಚಿಂಗಳೆ, ಬೆಳಗಾವಿ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಯುವ ನಾಯಕ ರಾಹುಲ್ ಜಾರಕಿಹೊಳಿ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್, ಕೆಪಿಸಿಸಿ ಸದಸ್ಯ ರಾಜೇಂದ್ರ ಪಾಟೀಲ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಎಂ.ಜೆ. ಸೇರಿದಂತೆ ಅನೇಕರು ಇದ್ದರು.