ಶತಾಯಗತಾಯ ಬಿಜೆಪಿ ಅಧಿಕಾರಕ್ಕೆ ಬರಬಾರದು: ಶೆಟ್ಟರ ಶಪಥ

ಶತಾಯಗತಾಯ ಬಿಜೆಪಿ ಅಧಿಕಾರಕ್ಕೆ ಬರಬಾರದು: ಶೆಟ್ಟರ ಶಪಥ

 

ಶೆಟ್ಟರ್‌ರನ್ನು ಕರೆತರಲು ಹುಬ್ಬಳ್ಳಿಯಿಂದ 2 ಹೆಲಿಕಾಪ್ಟರ್ ವ್ಯವಸ್ಥೆ ಮಾಡಿದ ಕಾಂಗ್ರೆಸ್‌

ಹುಬ್ಬಳ್ಳಿ : ಸಂಜೆಯೊಳಗೆ ಮಹತ್ವದ ಬೆಳವಣಿಗೆಯಾಗಲಿದೆ. ಯಾವುದೇ ಭಯ ಇಲ್ಲ, ಶತಾಯಗತಾಯ ಬಿಜೆಪಿ ಅಧಿಕಾರಕ್ಕೆ ಬರಬಾರದು ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಶಪಥ ಮಾಡಿದ್ದಾರೆ.

ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಹಿರಿಯರಿಗೆ ಬಿಜೆಪಿಯಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬುವುದು ಗೋತ್ತಿಲ್ಲ, ಹೀಗಾಗಿ ಹೊರಗೆ ಬಂದಿರುವೆ ಎಂದರು.

ಬಿಜೆಪಿಯ ಹಿರಿಯ ನಾಯಕ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇಂದೇ ಬೆಂಗಳೂರಿಗೆ ತೆರಳಿ ರಾಹುಲ್ ಗಾಂಧಿ ಸಮ್ಮುಖದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗುವ ಸ್ಪೋಟಕ್‌ ಮಾಹಿತಿ ಹೊರಬಿದ್ದಿದೆ.

ಹುಬ್ಬಳ್ಳಿ, ಧಾರವಾಡ ಸೆಂಟ್ರಲ್ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಶೆಟ್ಟರ್‌ಗೆ ಬಿಜೆಪಿ ಟಿಕೆಟ್ ನಿರಾಕರಿಸಿತ್ತು. ಬಿಜೆಪಿಯಿಂದ ಟಿಕೆಟ್ ವಂಚಿತವಾದ ಬೆನ್ನಲ್ಲೇ ಅಸಮಾಧಾನಗೊಂಡಿದ್ದರು. ಈ ಬೆನ್ನಲ್ಲೇ ದೆಹಲಿಗೆ ಹೋಗಿ ಹೈಕಮಾಂಡ್‌ನೊಂದಿಗೆ ಚರ್ಚೆ ನಡೆಸಿದ್ದರು.

ಶನಿವಾರ ರಾತ್ರಿ ಕೇಂದ್ರ ಸಚಿವರಾದ ಧರ್ಮೇಂದ್ರ ಪ್ರಧಾನ್, ಪ್ರಹ್ಲಾದ್ ಜೋಷಿ ಮತ್ತು ಸಿಎಂ ಬೊಮ್ಮಾಯಿ ಮನೆಗೆ ತೆರಳಿ ಮಾತುಕತೆ ನಡೆಸಿದ್ದರು. ಸಂಧಾನ ಮಾತುಕತೆ ವಿಫಲವಾದ ಬೆನ್ನಲ್ಲೇ ಭಾನುವಾರ ಶಿರಸಿಗೆ ತೆರಳಿ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಅವರಿಗೆ ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ನೀಡಿದ್ದಾರೆ.

ಬಿಜೆಪಿಗೆ ಗುಡ್ ಬೈ ಹೇಳಿದ ಬಳಿಕ ಶೆಟ್ಟರ್, ಕಾಂಗ್ರೆಸ್‌ಗೆ ಸೇರಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜಗದೀಶ್ ಶೆಟ್ಟರ್ ಸ್ವಾಗತಕ್ಕೆ ಈಗಾಗಲೇ ಕಾಂಗ್ರೆಸ್ ವೇದಿಕೆ ಸಿದ್ಧಗೊಂಡಿದ್ದು, ಶೆಟ್ಟರ್‌ರನ್ನು ಕರೆತರಲು ಹುಬ್ಬಳ್ಳಿಯಿಂದ 2 ಹೆಲಿಕಾಪ್ಟರ್ ವ್ಯವಸ್ಥೆ ಮಾಡಲಾಗಿದೆ.