ಬೆಂಗಳೂರು: ಶೆಟ್ಟರ್ ಪಕ್ಷ ಸೇರ್ಪಡೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಶಕ್ತಿ ಬರಲಿದೆ ಎಂದರು. ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಯಾಗಿದೆ ನಿನ್ನೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರೆ. ನಿನ್ನೆ ರಾತ್ರಿಯೇ ಬಿಜೆಪಿ ಕಚೇರಿಗೆ ಆಪ್ತ ಸಹಾಯಕರ ಮೂಲಕ ರಾಜೀನಾಮೆ ಪತ್ರವನ್ನು ಶೆಟ್ಟರ್ ರವಾನಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ತೆರಳಿ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದರು. ತದನಂತರ ಬೆಂಗಳೂರಿಗೆ ಆಗಮಿಸಿ ರಾತ್ರಿ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿದ್ದಾರ.
ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಬಳಿಕ ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್ ಗೆ ಸೇರ್ಪಡೆಯಾದರು.
ಈ ಸಂದರ್ಭದಲ್ಲಿ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಶೆಟ್ಟರ್ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದ ರಾಜಕಾರಣಿ, ಒಬ್ಬ ಶಕ್ತಿವಂತ ನಾಯಕ. ರಾಜ್ಯದ ಸಿಎಂ, ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದು, ಪಕ್ಷದ ತತ್ವ, ಸಿದ್ದಾಂತ ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ.