ಬೆಂಗಳೂರು: ಬಹು ನಿರೀಕ್ಷಿತ ದ್ವಿತೀಯ ಪಿಯುಸಿ ಅಂತಿಮ ಪರೀಕ್ಷಾ ಫಲಿತಾಂಗಳು ಪ್ರಕಟವಾಗಿದ್ದು, ರಾಜ್ಯಾದ್ಯಂತ 5.24 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ .ದಕ್ಷಿಣಕನ್ನಡ ಜಿಲ್ಲಗೆ ಪ್ರಥಮ ಸ್ಥಾನ, ಯಾದಗಿರಿ ಕೊನೆಯ ಸ್ಥಾನ
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದ್ದು, ಉಡುಪಿ ಜಿಲ್ಲೆಗೆ 2ನೇ ಸ್ಥಾನ ಲಭಿಸಿದೆ. ಕೊಡಗು 3, ಉತ್ತರ ಕನ್ನಡ 4, ಯಾದಗಿರಿ ಕೊನೆಯ ಸ್ಥಾನದಲ್ಲಿದೆ.ಎಂದು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ.
ಸಾಮಾನ್ಯ ವಿದ್ಯಾರ್ಥಿಗಳು, ಪುನರಾವರ್ತಿತರು ಮತ್ತು ಖಾಸಗಿ ಅಭ್ಯರ್ಥಿಗಳು ಸೇರಿದಂತೆ ಎಲ್ಲಾ ವಿದ್ಯಾರ್ಥಿ ಪ್ರಕಾರಗಳಿಗೆ ಫಲಿತಾಂಶಗಳನ್ನು ಬಿಡುಗಡೆ ಮಾಡಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಫಲಿತಾಂಶ ಪ್ರಕಟ ಮಾಡಿದ್ದು, ಪರೀಕ್ಷೆಯಲ್ಲಿ ಒಟ್ಟು 5,24,209 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪರೀಕ್ಷೆಗೆ 727,923 ವಿದ್ಯಾರ್ಥಿಗಳು ನೋಂದಾಯಿಸಿದ್ದು, ಈ ಪೈಕಿ 725,821 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹರಾಗಿದ್ದಾರೆ. 23,754 ಮಂದಿ ವಿದ್ಯಾರ್ಥಿಗಳು ಎಲ್ಲ ವಿಷಯಗಳ ಪರೀಕ್ಷೆಗೆ ಗೈರಾಗಿದ್ದಾರೆ. 702,067 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಈ ಪೈಕಿ 524,209 ಮಂದಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿದುಬಂದಿದೆ. 2023 ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಗೆ ಒಟ್ಟು 7,02,067 ವಿದ್ಯಾರ್ಥಿಗಳು ಹಾಜರಾಗಿದ್ದರು. ಒಟ್ಟು 61 ಕೇಂದ್ರದಲ್ಲಿ ಮೌಲ್ಯಮಾಪನ ಮಾಡಲಾಗಿತ್ತು.
ಕಲಾ ವಿಭಾಗದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 1,34,876. ಕಲಾ ವಿಭಾಗದಲ್ಲಿ ಶೇಕಡಾ 61.22ರಷ್ಟು ಫಲಿತಾಂಶ ಬಂದಿದ್ದು, ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು KSEEB ಯ ಅಧಿಕೃತ ವೆಬ್ಸೈಟ್ನಲ್ಲಿ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು.