ಬೆಳಗಾವಿ: ಸವದತ್ತಿ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ನಾಮಪತ್ರ ಅಂಗೀಕಾರಗೊಂಡಿದೆ.
ಬೆಳಗಾವಿ ಜಿಲ್ಲೆ ಸವದತ್ತಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರ ಅಫಿಡವಿಟ್ಗೆ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಆಕ್ಷೇಪ ವ್ಯಕ್ತಪಡಿಸಿತ್ತು.
ಈ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಗೆ ಆರಂಭವಾದ ವಿಚಾರಣೆ ಮುಕ್ತಾಯಗೊಂಡಿದೆ. ವಿಚಾರಣೆ ನಂತರ ಚುನಾವಣಾಧಿಕಾರಿ ಡಾ. ರಾಜೀವ ಕೊಲೇರ್ ತೀರ್ಪು ನೀಡಿದ್ದಾರೆ.