ಬೆಂಗಳೂರು: ಲಿಂಗಾಯತರೆಲ್ಲ ಭ್ರಷ್ಟರು ಅಂತ ಹೇಳಿಲ್ಲ, ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿರುವೆ ಅಂತ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿರುವ ಅವರು ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿ ಸೃಷ್ಟಿಸಿದ ಸುಳ್ಳುಗಳಷ್ಟೆ ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ.