ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಪ್ರಿಯಾಂಕಾ ಗಾಂಧಿ ಕಾಫಿನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ ಪ್ರಚಾರ

ಶೃಂಗೇರಿ ಶಾರದಾಂಬೆ ದರ್ಶನ ಪಡೆದ ಪ್ರಿಯಾಂಕಾ ಗಾಂಧಿ  ಕಾಫಿನಾಡಿನಲ್ಲಿ ಪ್ರಿಯಾಂಕಾ ಗಾಂಧಿ ಅಬ್ಬರ ಪ್ರಚಾರ

ಚಿಕ್ಕಮಗಳೂರು : ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಪರ ಭರ್ಜರಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕಾ ಗಾಂಧಿ ಇಂದು(ಏಪ್ರಿಲ್‌ 26) ರಂದು ಕಾಫಿನಾಡು ಚಿಕ್ಕಮಗಳೂರಿಗೆ ಆಗಮಿಸಿ, ಅವರು ಮೊದಲು ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ದರ್ಶನ ಪಡೆದುಕೊಂಡರು.

ಶಕ್ತಿ ಪೀಠಗಳಲ್ಲಿ ಒಂದಾದ ಚಿಕ್ಕಮಗಳೂರು ಜಿಲ್ಲೆಯ ಪ್ರಮುಖ ದೇವಸ್ಥಾನ ಶೃಂಗೇರಿ ಶಾರದಾಂಬಾ ದೇವಸ್ಥಾನಕ್ಕೆ ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ. ಶಾರದಾಂಬೆಯ ದರ್ಶನ ಪಡೆದ ಪ್ರಿಯಾಂಕಾ ಗಾಂಧಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಗಾಂಧಿ ಕುಟುಂಬ ಶೃಂಗೇರಿ ಶಾರದಾಂಬಾ ದೇವಸ್ಥಾನದ ಮೇಲೆ ವಿಶೇಷ ನಂಬಿಕೆ ಹೊಂದಿದ್ದು, ಇಂದಿರಾ ಗಾಂಧಿ, ರಾಹುಲ್ ಗಾಂಧಿ ಕೂಡ ದೇವಾಲಯಕ್ಕೆ ಭೇಟಿ ನೀಡಿದ್ದರು. 1978ರಲ್ಲಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದ ವೇಳೆ ಇಂದಿರಾ ಗಾಂಧಿ ಶೃಂಗೇರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದರು.

2018ರ ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ ಕರ್ನಾಟಕಕ್ಕೇ ಭೇಟಿ ನೀಡಿದ್ದ ರಾಹುಲ್ ಗಾಂಧಿ ಶೃಂಗೇರಿಗೆ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದ್ದರು. ಅದರಂತೆ ಕರ್ನಾಟಕ ವಿಧಾನಸಭೆ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಪ್ರಿಯಾಂಕಾ ಗಾಂಧಿ ಶೃಂಗೇರಿಗೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.