ಬೆಳಗಾವಿ : ಜಗದೀಶ್ ಶೆಟ್ಟರ್ ಅವರಿಗೆ ಬಿಜೆಪಿಯಿಂದ ಏನು ಅನ್ಯಾಯವಾಗಿದೆ. ಬಿಜೆಪಿ ಲಿಂಗಾಯತರಿಗೆ ಎಂದಿಗೂ ಮೋಸ ಮಾಡಿಲ್ಲ. ಸೋತ ಲಿಂಗಾಯತರಿಗೆ ದೊಡ್ಡ ಸ್ಥಾನ ಮಾನ ನೀಡಿದೆ. ಅವರು ಕಾಂಗ್ರೆಸ್ ಹೋದರೆ ಯಾವುದೇ ಪ್ರಭಾವ ನಮ್ಮ ಪಕ್ಷಕ್ಕೆ ಬಿರುವುದಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಬುಧವಾರ ನಗರದ ಬಿಜೆಪಿ ಕಚೇರಿಯಲ್ಲಿ ಕರೆಯಲಾದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಅಲ್ಲದೆ ಲಕ್ಷ್ಮಣ ಸವದಿಗೂ ಅನ್ಯಾಯ ಮಾಡಿಲ್ಲ. ಮಹೇಶ ಕುಮಟಳ್ಳಿ ಅವರಿಗೆ ಅನ್ಯಾಯವಾಗಿದೆ. ಕಾರಣ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಬಂದ ಎಲ್ಲರಿಗೂ ಸಚಿವ ಸ್ಥಾನ ಮಾಡುವುದಾಗಿ ಭರವಸೆ ನೀಡಿದ್ದರು. ಆದರೆ ಅವರಿಗೆ ನೀಡಲಿಲ್ಲ. ಲಕ್ಷ್ಮಣ ಸವದಿ ಅವರು ಸೋತಿದ್ದರೂ ಡಿಸಿಎಂ ಆಗಿದ್ದು ಮಹೇಶ ಕುಮಟಳ್ಳಿಯಿಂದ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಲಿಂಗಾಯತ ನಾಯಕರು ಬಿಜೆಪಿ ಬಿಟ್ಟು ಹೋದವರು ಬಿ.ಎಲ್.ಸಂತೋಷ ದಬ್ಬಾಳಿಕೆಯಿಂದ ಹೊರ ಹೋಗುವ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಲಕ್ಷ್ಮಣ ಸವದಿ ದೂರಿದ್ದಾರೆ ಎಂದಿದ್ದಾರೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಲಕ್ಷ್ಮಣ ಸವದಿಗೆ ಉಪಮುಖ್ಯಮಂತ್ರಿ ಮಾಡಿದ್ದೆ ಬಿ.ಎಲ್.ಸಂತೋಷ ಅವರು ಎಂದರು.
ರಾಜಕೀಯದಲ್ಲಿ ವೈಯಕ್ತಿಕವಾಗಿ ಮಾತನಾಡುವುದು ಸರಿಯಲ್ಲ ಎಂದರು. ಕಳೆದ ಎರಡೂ ದಿನದಿಂದ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸುತ್ತಿದ್ದೇನೆ. ಕಳೆದ ಬಾರಿಗಿಂತ ಈ ಬಾರಿ ಗಣನೀಯವಾಗಿ ನಮ್ಮ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದರು.
ಬಿಜೆಪಿ ಸರಕಾರ ಎಲ್ಲ ಸಮುದಾಯಕ್ಕೆ ಮೀಸಲಾತಿ ನೀಡಿದೆ. ಮೊದಲು ವಿಪಕ್ಷಗಳು ಬಿಜೆಪಿ ಎಂದರೆ ದಲಿತ ವಿರೋಧಿ ಎಂದು ಬಿಂಬಿಸುತ್ತಿದ್ದವು. ಆದರೆ ಎಲ್ಲ ಸಮುದಾಯಕ್ಕೆ ಬಿಜೆಪಿ ಸರಕಾರ ಮೀಸಲಾತಿ ನೀಡಿ ಎಲ್ಲ ಸಮುದಾಯದವರನ್ನು ವಿಶ್ವಾಸ ತೆಗೆದುಕೊಂಡು ಹೋಗುವ ಕೆಲಸ ಮಾಡಿದೆ ಎಂದರು.
ಬಿಜೆಪಿ ರಾಜ್ಯ ವಕ್ತಾರ ಎಂ.ಬಿ.ಜೀರಲಿ, ಶರದ್ ಪಾಟೀಲ, ನಿತೀಶ್ ಚೌಗುಲೆ, ಎಫ್.ಎಸ್.ಸಿದ್ದನಗೌಡರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.