ಕಲಬುರಗಿ: ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಲ್ಲಿ ಎಲ್ಲ ಮಹಿಳೆಯರಿಗೆ ಉಚಿತ ಬಸ್ ಒದಗಿಸಲಾಗುವುದು ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಕಮಲಾಪುರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಮತ್ತಮಡು ಪರ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಪಂಚಾಯಿತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹಿಂದೆಮುಂದೆ ನೋಡುವ ಈ ದಿನಗಳಲ್ಲಿ ನಾನು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಶಿಕಾರಿಪುರದಲ್ಲಿ ನನ್ನ ಮಗ ವಿಜಯೇಂದ್ರ ಸ್ಪರ್ಧಿಸಿದ್ದರೂ ನಾನು ಅಲ್ಲಿ ಪ್ರಚಾರಕ್ಕೆ ಹೋಗುವ ಬದಲು ರಾಜ್ಯದ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದೇನೆ. ನನ್ನ ಪುತ್ರ ವಿಜಯೇಂದ್ರ 50 ಸಾವಿರ ಅಂತರಗಳಿಂದ ಜಯಗಳಿಸುತ್ತಾರೆ ಎಂದರು.