This is the title of the web page
This is the title of the web page

ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ.:ಪ್ರಧಾನಮಂತ್ರಿ ನರೇಂದ್ರ ಮೋದಿ

ಬಿಜೆಪಿ ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ.:ಪ್ರಧಾನಮಂತ್ರಿ ನರೇಂದ್ರ ಮೋದಿ

 

ವಿಜಯಪುರ:ವಿಜಯಪುರದ ಸೈನಿಕ ಶಾಲೆ ಆವರಣದಲ್ಲಿ ಆಯೋಜಿಸಲಾಗಿರುವ ಬಿಜೆಪಿ ಸಮಾವೇಶದಲ್ಲಿ ಮಾತನಾಡಿರುವ ಅವರು, ಪಂಚನದಿಗಳ‌ ನಾಡು ವಿಜಯಪುರ ಜನತೆಗೆ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದರು.

ಸಬ್​ ಕಾ ಸಾತ್ ಸಬ್​ ಕಾ ವಿಕಾಸ್​ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದು, ಕಾಯಕ, ದಾಸೋಹ ನಮಗೆ ಪ್ರೇರಣೆಯಾಗಿದೆ. ಬಸವೇಶ್ವರ ಹಾದಿಯಲ್ಲಿ ನಾವು ನಡೆಯುತ್ತೇವೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ಹೇಳಿದ್ದಾರೆ.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಾಗಿದೆ. ಸಬ್​ ಕಾ ಸಾತ್ ಸಬ್​ ಕಾ ವಿಕಾಸ್​ಗೆ ಭಗವಾನ್ ಬಸವಣ್ಣನವರೂ ಸ್ಫೂರ್ತಿಯಾಗಿದ್ದಾರೆ. ಕಾಯಕ ಮತ್ತು ದಾಸೋಹದ ಪ್ರೇರಣೆ ನಮ್ಮ ಅಭಿವೃದ್ಧಿ ಯೋಜನೆಗಳ ಹಿಂದಿದೆ. ಆದಿವಾಸಿ, ಮಹಿಳೆಯರು, ದಲಿತರು ಸೇರಿದಂತೆ ಎಲ್ಲ ವರ್ಷಗಗಳ ಅಭಿವೃದ್ಧಿಗೆ ಬದ್ಧರಾಗಿದ್ದೇವೆ. ಅನ್ನ, ಆಶ್ರಯ್, ಅಕ್ಷರಕ್ಕಾಗಿ ಡಬಲ್ ಎಂಜಿನ್ ಸರ್ಕಾರ ಕೆಲಸ ಮಾಡಿದೆ ಎಂದು ತಿಳಿಸಿದರು.

ಇಂದು ದೆಹಲಿಯಿಂದ 1 ರೂಪಾಯಿ ಬಿಡುಗಡೆಯಾದರೆ ನೂರಕ್ಕೆ ನೂರರಷ್ಟು ಫಲಾನುಭವಿಗಳಿಗೆ ತಲುಪುತ್ತಿದೆ. ಬಿಜೆಪಿ ಸರ್ಕಾರ ರೈತರ ಖಾತೆಗೆ ಹಣ ನೇರ ಜಮೆ ಮಾಡಿದೆ. ಮಧ್ಯವರ್ತಿಗಳಿಲ್ಲದೇ ರೈತರ ಖಾತೆಗಳಿಗೆ ನೇರವಾಗಿ ಹಣ ಜಮೆ ಮಾಡಿದೆ, ಮಾಡುತ್ತಿದೆ. ಡಬಲ್​ ಇಂಜಿನ್​ ಸರ್ಕಾರದಿಂದ ಕರ್ನಾಟಕ ಅಭಿವೃದ್ಧಿಯಾಗುತ್ತಿದೆ. ಕರ್ನಾಟಕದಲ್ಲೂ ಬಡವರಿಗೆ ರೇಷನ್​ ನೀಡುತ್ತಿದ್ದೇವೆ ಎಂದು ಹೇಳಿದರು.

ಕಳಸಾ ಬಂಡೂರಿ, ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಜೆಟ್​​ನಲ್ಲಿ ಅನುದಾನ ನೀಡಿದ್ದೇವೆ. ವಿಜಯಪುರದ ರೈತರಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿದ್ದೇವೆ. ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆಯ ಕೆಲಸ ಆರಂಭವಾಗಿದೆ. ಇದು ಡಬಲ್ ಎಂಜಿನ್ ಸರ್ಕಾರದ ಕಟಿಬದ್ಧತೆಯಾಗಿದೆ. ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿಯೂ ಡಬಲ್ ಎಂಜಿನ್ ಸರ್ಕಾರ ಕ್ರಮ ಕೈಗೊಂಡಿದೆ. ಜಲ ಜೀವನ್ ಮಿಷನ್ ಯೋಜನೆ ಅನುಷ್ಠಾನಕ್ಕೂ ಮೊದಲು ಕುಡಿಯುವ ನೀರನ್ನು ಎಲ್ಲಿಂದಲೋ ತರಬೇಕಿತ್ತು. ಈಗ ಮನೆ ಮನೆಗೆ ನೀರು ಬರುತ್ತಿದೆ ಎಂದು ತಿಳಿಸಿದರು.

ಬಿಜೆಪಿಯ ಡಬಲ್ ಎಂಜಿನ್ ಸರ್ಕಾರ ವೋಕಲ್ ಫಾರ್ ಲೋಕಲ್ ಆಗಿ ಕಾರ್ಯನಿರ್ವಹಿಸುತ್ತಿದೆ. ಕರ್ನಾಟಕದಲ್ಲಿ ನೇಕಾರ ಸಮ್ಮಾನ್ ಯೋಜನೆ ಜಾರಿಗೆ ತಂದೆವು. ಕೇಂದ್ರ ಸರ್ಕಾರವೂ ಅದಕ್ಕೆ ಬೆಂಬಲ ನೀಡಿದೆ. ವಿಜಯಪುರದಲ್ಲಿ ವಿಮಾನ ನಿಲ್ದಾಣ​ ನಿರ್ಮಾಣ ಮಾಡಿದ್ದೇವೆ. ಜಿಲ್ಲೆಗೆ ಹೊಸ ಕೈಗಾರಿಕೆಗಳು ಬರುತ್ತಿವೆ.