ಕಲಬುರಗಿ: ಜಿಲ್ಲೆಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮಣಿಕಂಠ ರಾಠೋಡ ಮೇಲೆ ಇರುವ ಕಳ್ಳತನ ಆರೋಪ ಸಾಬೀತಾಗಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭೆಯನ್ನು ರದ್ದುಗೊಳಿಸಲಾಗಿದೆ.
ಚಿತ್ತಾಪುರ ಕ್ಷೇತ್ರದಲ್ಲಿ ಮೇ 6ರಂದು ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸಭೆ ಆಯೋಜಿಸಲಾಗಿದ್ದು, ಟಿಕೆಟ್ ಪಡೆದುಕೊಂಡು ಕಣಕ್ಕೆ ಇಳಿದ ಮಣಿಕಂಠ ರಾಠೋಡ ರೌಡಿಶೀಟರ್ ಆಗಿರುವ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಮಣಿಕಂಠ ವಿರುದ್ಧ ಆಕ್ರೋಶ ವ್ಯಕ್ತವಾಗಿತ್ತು. ಪ್ರಧಾನಿ ಅವರನ್ನು ಕರೆಸಿದರೆ ಪಕ್ಷಕ್ಕೆ ಮುಜುಗರವಾಗಬಹುದು ಎಂಬ ಆತಂಕದಿಂದ ಸಭೆಯನ್ನು ರದ್ದುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.