-
ಬೆಂಗಳೂರು: ರಾಜ್ಯದ ವಿಧಾನಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುವುದು ನಿಶ್ಚಿತವಾಗಿದ್ದು, ಸದ್ಯದ ಚುನಾವಣೆ ಆಯೋಗದ ಮಾಹಿತಿ ಪ್ರಕಾರ, 119 ಕಡೆಯಲ್ಲಿ ಕಾಂಗ್ರಸ್ ಮುನ್ನಡೆ ಸಾಧಿಸಿದ್ದರೆ, ಬಿಜೆಪಿ 75, ಸ್ವತಂತ್ರ 5 ಜನತಾದಳ (ಜಾತ್ಯತೀತ) 23 ಕಲ್ಯಾಣ ರಾಜ್ಯ ಪ್ರಗತಿ ಪಕ್ಷ 1 ಸರ್ವೋದಯ ಕರ್ನಾಟಕ ಪಕ್ಷ 1ರಲ್ಲಿ ಮುನ್ನಡೆ ಸಾಧಿಸಿದೆ.
ಶಿಗ್ಗಾವಿಯಲ್ಲಿ ಸತತ ನಾಲ್ಕನೇ ಬಾರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗೆಲುವು: ಅಧಿಕೃತ ಘೋಷಣೆ ಬಾಕಿ | ಅಒ ಃಚಿsಚಿvಡಿಚಿರಿ ಃommಚಿi Wiಟಿs
ಹಾವೇರಿ: ಶಿಗ್ಗಾಂವ್ ವಿಐಪಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಪಠಾಣ್ ವಿರುದ್ಧ 20,000 ಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಬೊಮ್ಮಾಯಿ ಈ ಕ್ಷೇತ್ರದಿಂದ ಸತತ ನಾಲ್ಕನೇ ಬಾರಿಗೆ ಮರು ಆಯ್ಕೆಗೊಂಡಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.
ಬೆಳಿಗ್ಗೆ 11.30 ಕ್ಕೆ ಚುನಾವಣಾ ಆಯೋಗದ ಅಂಕಿಅಂಶಗಳು ಬೊಮ್ಮಾಯಿ 59,242 ಮತಗಳನ್ನು ಪಡೆದಿದ್ದರೆ, ಕಾಂಗ್ರೆಸ್ ಅಭ್ಯರ್ಥಿ ಪಠಾಣ್ 37,723 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಜೆಡಿಎಸ್ ನಿಂದ ಶಶಿಧರ್ ಯಲಿಗಾರ್ ಕಣದಲ್ಲಿದ್ದಾರೆ.
ಒಂದು ಕಾಲದಲ್ಲಿ ತನ್ನ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿದ್ದ ಈ ಸ್ಥಾನವನ್ನು 1999 ರಿಂದ ಗೆಲ್ಲಲು ಕಾಂಗ್ರೆಸ್ ಗೆ ಸಾಧ್ಯವಾಗಿಲ್ಲ. 1999 ಹಾಗೂ 2004ರಲ್ಲಿ ಜೆಡಿಎಸ್ ಹಾಗೂ 2004ರಲ್ಲಿ ಪಕ್ಷೇತರ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು. ಬೊಮ್ಮಾಯಿ ಅವರು 2008 ರಲ್ಲಿ ಜನತಾದಳ (ಯುನೈಟೆಡ್) ತೊರೆದ ನಂತರ ಬಿಜೆಪಿ ಅಭ್ಯರ್ಥಿಯಾಗಿ ಮೊದಲ ಬಾರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದರು.
ಕಾಂಗ್ರೆಸ್ ಆರಂಭದಲ್ಲಿ ಶಿಗ್ಗಾವಿಯಿಂದ ಹುಬ್ಬಳ್ಳಿಯ ಅಂಜುಮನ್-ಇ-ಇಸ್ಲಾಂ ಅಧ್ಯಕ್ಷ ಮೊಹಮ್ಮದ್ ಯೂಸುಫ್ ಸವಣೂರ ಅವರಿಗೆ ಟಿಕೆಟ್ ಘೋಷಿಸಿತ್ತು, ಆದರೆ ನಂತರ ಅವರ ಬದಲಿಗೆ ನೆರೆಯ ಹಾನಗಲ್ ತಾಲ್ಲೂಕಿನ ಬೊಮ್ಮನಹಳ್ಳಿಯ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಪಠಾಣ್ ಅವರನ್ನು ಕಣಕ್ಕಿಳಿಸಿತು.
2018ರ ಚುನಾವಣೆಯಲ್ಲಿ ಬೊಮ್ಮಾಯಿ 83,868 ಮತಗಳನ್ನು ಪಡೆದು, ಕಾಂಗ್ರೆಸ್ನ ಸೈಯದ್ ಅಝೀಮ್ಪೀರ್ ಖಾದ್ರಿ ಅವರನ್ನು 74,603 ಮತಗಳಿಂದ ಸೋಲಿಸಿದ್ದರು. 2013 ಮತ್ತು 2008ರ ಚುನಾವಣೆಯಲ್ಲಿ ಬೊಮ್ಮಾಯಿ ಅವರು ಕಾಂಗ್ರೆಸ್ ಅಭ್ಯರ್ಥಿ ಖಾದ್ರಿ ಅವರನ್ನು ಕ್ರಮವಾಗಿ 9,503 ಮತ್ತು 12,862 ಮತಗಳ ಅಂತರದಿಂದ ಸೋಲಿಸಿದ್ದರು.