ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಲನಚಿತ್ರ ನಟರು ಹಾಗೂ ರಾಷ್ಟ್ರೀಯ ನಾಯಕರು ಆಗಮನ

ಸಿಎಂ ಮತ್ತು ಡಿಸಿಎಂ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಚಲನಚಿತ್ರ ನಟರು ಹಾಗೂ ರಾಷ್ಟ್ರೀಯ ನಾಯಕರು ಆಗಮನ

 

ಬೆಂಗಳೂರು, ನೂತನ ಸಿಎಂ ಆಗಿ ಸಿದ್ಧರಾಮಯ್ಯ, ಡಿಸಿಎಂ ಆಗಿ ಡಿ.ಕೆ ಶಿವಕುಮಾರ್ ಇಂದು ಪ್ರಮಾಣ ವಚನ ಸ್ವೀಕರಿಸಲು ವೇದಿಕೆ ಸಜ್ಜಾಗಿದ್ದು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ರಾಜಕೀಯ ಗಣ್ಯರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಸಿ ವೇಣುಗೋಪಾಲ್,ಆಗಮಿಸಿದ್ದಾರೆ.

ಮಧ್ಯಾಹ್ನ 12.30ಕ್ಕೆ ಸಿಎಂ ಮತ್ತು ಡಿಸಿಎಂ ಹಾಗೂ 8 ಸಚಿವರು ಕಂಠೀರವ ಸ್ಟೇಡಿಯಂನಲ್ಲಿ ಆಯೋಜಿಸಿರುವ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕಾರ್ಯಕ್ರಮಕ್ಕೆ ಗಣ್ಯಾತೀಗಣ್ಯರು ಸಾಕ್ಷಿಯಾಗಲಿದ್ದಾರೆ.