ಬೆಳಗಾವಿ: ಬೆಳಗಾವಿಯಲ್ಲಿ ಡಿಕೆಶಿ ಹೇಳಿಕೆ ಕಷ್ಟ ಕಾಲದಲ್ಲಿ ನಮ್ಮ ಪಕ್ಷಕ್ಕೆ ಬಂದು ಶಕ್ತಿ ತುಂಬಿದ್ದಾರೆ.ನನಗೆ ಮಾತನಾಡಲು ಟೈಮ್ ಸಿಕ್ಕಿರಲಿಲ್ಲ. ಫುಲ್ ಬಿಜಿ ಇದ್ದೆ ಅದಕ್ಕೆ ನಮ್ಮ ಸವದಿ ಸಾಹೇಬರಿಗೆ, ಜಗದೀಶ್ ಶೆಟ್ಟರ್ ಸಾಹೇಬರಿಗೆ ಭೇಟಿ ಮಾಡಲು ಬಂದಿದ್ದೇನೆ ಎಂದರು.
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿ ಅಥಣಿ ವಿಧಾನಸಭಾ ಮತಕ್ಷೇತ್ರದಿಂದ ದಾಖಲೆ ಗೆಲುವು ಸಾಧಿಸಿರುವ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ ನಿವಾಸಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಮಂಗಳವಾರ ತಡರಾತ್ರಿ ಸುಮಾರು ಒಂದು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು .ಶಾಸಕರು, ವಿಧಾನ ಪರಿಷತ್ ಸದಸ್ಯರನ್ನು ಹೊರಗಿಟ್ಟು ಗೌಪ್ಯವಾಗಿ ಚರ್ಚೆ ನಡೆಸಿದರು. ಡಿಕೆಶಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜೊತೆಗೆ ಸುದೀರ್ಘ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಕಾಂಗ್ರೆಸ್ ಶಾಸಕ ಲಕ್ಷ್ಮಣ ಸವದಿ, ರಾಜಕೀಯ ಕುರಿತು ಯಾವುದೇ ಚರ್ಚೆ ಆಗಿಲ್ಲ. ಡಿಕೆ ಶಿವಕುಮಾರ್ ಅವರು ಸೌಜನ್ಯಯುತವಾಗಿ ಭೇಟಿಗೆ ಆಗಮಿಸಿದ್ದರು ಎಂದರು.
ಸರಕಾರದಲ್ಲಿ ಸ್ಥಾನ ಮಾನ ನೀಡುವ ಕುರಿತು ಕೂಡ ಯಾವುದೇ ಚರ್ಚೆ ಆಗಿಲ್ಲ. ಇದೊಂದು ಔಪಚಾರಿಕ ಭೇಟಿ ಎಂದರು.
ಇದಕ್ಕೂ ಮುನ್ನ ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿ
ಸಚಿವ ಸ್ಥಾನ ಸಿಗದಿದ್ದಕ್ಕೆ ಬೇಸರಗೊಂಡಿದ್ದಾರಾ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೂ ಬೇಸರ ಇಲ್ಲಾ, ನಾನು ಒಬ್ಬ ಪಕ್ಷ ಅಧ್ಯಕ್ಷನಾಗಿ ಬಂದಿದ್ದೇನೆ ಎಂದರು.
ಸಚಿವ ಸ್ಥಾನ ಸಿಗುವ ನಿರೀಕ್ಷೆಯಲ್ಲಿದ್ದರಾ ಎಂಬ ಪ್ರಶ್ನೆಗೆ ಉತ್ತರಿಸುದ ಅವರು, ಅದು ನನಗೆ ಗೊತ್ತಿಲ್ಲ, ಕಾಂಗ್ರೆಸ್ ಪಕ್ಷ ಯಾರನ್ನೂ ಕೈ ಬಿಡುವುದಿಲ್ಲ.ಯಾವಾಗ ಎನೂ ಎತ್ತ ಅಂತಾ ಕೇಳಬೇಡಿ ಎಂದರು.
ಈ ಸಂದರ್ಭದಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಬಾಬಾಸಾಹೇಬ ಪಾಟೀಲ, ಆಸೀಫ್ ಸೇಠ್ ಉಪಸ್ಥಿತರಿದ್ದರು.