ಬೆಳಗಾವಿ: ಭಾನುವಾರ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ ಕಳೆದ 24 ಗಂಟೆಗಳಲ್ಲಿ ಉತ್ತರ ಕನ್ನಡ ಕದ್ರಾ, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ಬೆಳಗಾವಿ, ದಕ್ಷಿಣ ಕನ್ನಡ ಜಿಲ್ಲೆಗಳ ವ್ಯಾಪ್ತಿಯ ಅನೇಕ ಕಡೆಗಳಲ್ಲಿ ಕನಿಷ್ಠ 2 ಸೆಂಟೀ ಮೀಟರ್‌ಗಳಿಂದ ಗರಿಷ್ಠ 07 ಸೆಂಟಿ ಮೀಟರ್ ಮಳೆ ದಾಖಲಾಗಿದೆ.
ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆ ಬರುವ ಮುನ್ಸೂಚನೆ ಇದೆ. ಮೂರು ದಿನಗಳ ನಂತರ ಅಂದರೆ ಜುಲೈ 5 ಮತ್ತು 6ರಂದು ಬೆಳಗಾವಿ ಧಾರವಾಢ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಭಾರಿ ಮಳೆ ಬರಲಿದ್ದು, ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಇಂದು ಜುಲೈ 2 ರಂದು ಭಾನುವಾರ ರಾತ್ರಿ ಮಳೆ ಸುರಿಯುವ ಲಕ್ಷಣಗಳು ಇವೆ. ಮುಂದಿನ ನಾಲ್ಕು ದಿನ ಹಗುರದಿಂದ ಸಾಧಾರಣವಾಗಿ, ಕೆಲವು ಪ್ರದೇಶಗಳಲ್ಲಿ ತುಂತುರು ಮಳೆ ಆಗಲಿದೆ. ಕನಿಷ್ಠ 20 ಡಿಗ್ರಿ ಸೆಲ್ಸಿಯಸ್ ಹಾಗೂ ಗರಿಷ್ಠ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.