ಜೈನಮುನಿ ಹತ್ಯೆ ಖಂಡಿಸಿ ಚಿಕ್ಕೋಡಿ ನಗರದಲ್ಲಿ ಮೌನ ಪ್ರತಿಭಟನೆ

ಜೈನಮುನಿ ಹತ್ಯೆ ಖಂಡಿಸಿ ಚಿಕ್ಕೋಡಿ ನಗರದಲ್ಲಿ ಮೌನ ಪ್ರತಿಭಟನೆ

 

ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ನಂದಿ ಪರ್ವತ ಆಶ್ರಮದಲ್ಲಿ ಕಾಮಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾದವರಿಗೆ ಕಠಿಣ ಶಿಕ್ಷೆ ನೀಡಬೇಕು. ಜೈನ ಸಮುದಾಯದ ಮುನಿಗಳಿಗೆ ಸುರಕ್ಷತೆ ಒದಗಿಸಬೇಕು ಎಂದು ಆಗ್ರಹಿಸಿ, ಚಿಕ್ಕೋಡಿ ನಗರದ ಬಸವೇಶ್ವರ ವೃತ್ತದಲ್ಲಿ ರಸ್ತೆ ತಡೆದು ಸಮುದಾಯದವರು ಪ್ರತಿಭಟನೆ ಮಾಡಿದರು.