ಹಾಸನ: ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯನ್ನು ಕಿಡಿಗೇಡಿಗಳು ಬೆಳ್ಳಂಬೆಳಿಗ್ಗೆಯೇ ಅಪಹರಿಸಿದ ಪ್ರಕರಣ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಮದುವೆ ಒಪ್ಪಂದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ದುರುಳರು ಯುವತಿಯನ್ನೇ ಅಪರಿಸಿದ್ದಾರೆ.
ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ ದುರುಳರು ಆಕೆಯನ್ನು ಅಪಹರಣ ಮಾಡಿದ್ದಾರೆ. ಅರ್ಪಿತಾ ಸಂಬಂಧಿ ರಾಮು ಎಂಬಾತನಿಂದಲೇ ಈ ಕೃತ್ಯ ನಡೆದಿದೆ ಎಂದು ಯುವತಿ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಹಾಸನ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ