ಬೆಳಗಾವಿ: ರಾತ್ರೋರಾತ್ರಿ ಕನ್ನಡ ಬಾವುಟಕ್ಕೆ ಬೆಂಕಿ ಹಚ್ಚಿ ದರ್ಪ ಮೆರೆದಿರುವ ಘಟನೆ ಬೆಳಗಾವಿ ತಾಲೂಕಿನ ಸುಳಗಾ ಗ್ರಾಮದಲ್ಲಿ ರಾಯಣ್ಣ ವೃತ್ತದ ಬಳಿ ನಡೆದಿದೆ.
ಹೊಸ ವರ್ಷದ ಸಂದರ್ಭದಲ್ಲೇ ಕಿಡಿಗೇಡಿಗಳು ಪುಂಡಾಟ ಮೆರೆದಿದ್ದಾರೆ. ರಾಯಣ್ಣ ವೃತ್ತಕ್ಕೆ ಕಟ್ಟಿದ್ದ ನಾಡಧ್ವಜಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪುಂಡರ ಈ ಕೃತ್ಯಕ್ಕೆ ಕನ್ನಡ ಪರ ಹೋರಾಟಗಾರರು ಆಕ್ರೋಶ ಹೊರ ಹಾಕಿದ್ದಾರೆ. ಕೂಡಲೇ ಕಿಡಿಗೇಡಿಗಳನ್ನು ಬಂಧಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.
ಇನ್ನು ಎರಡು ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿಯಲ್ಲಿ ಕನ್ನಡ ಬಾವುಟ ಸುಟ್ಟು ಜಗಜ್ಯೋತಿ ಬಸವೇಶ್ವರರ ಚಿತ್ರಕ್ಕೆ ಸಗಣಿ ಮೆತ್ತಿದ್ದ ಘಟನೆ ನಡೆದಿತ್ತು