ಬೆಂಗಳೂರು: ಮನೆಯಲ್ಲಿ ಮಹಿಳೆ ಒಬ್ಬಳೇ ಇದ್ದಾಗ ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಎಲೆಕ್ಟ್ರಾನಿಕ್ ಸಿಟಿಯ ಬೆಟ್ಟದಾಸನಪುರದ ಸಾಯಿ ಶಕ್ತಿ ಬಡಾವಣೆಯ ಗಂಗಾ ಬ್ಲಾಕ್ ನಲ್ಲಿ ನಡೆದಿದೆ. ನೀಲಂ (30) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.
ಪತಿ ಹಾರ್ಡ್ವೇರ್ ಶಾಪ್ ಜೊತೆ ಕಾಂಟ್ರಾಕ್ಟ್ ಕೆಲಸ ಮಾಡುತ್ತಿದ್ದು, ಮಧ್ಯಾಹ್ನ ಮಕ್ಕಳು ಶಾಲೆ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮಕ್ಕಳು ಮನೆಯಲ್ಲಿ ನೋಡಿದಾಗ ಹಾಲ್ನಲ್ಲಿ ತಾಯಿ ಕೊಲೆಯಾಗಿ ಬಿದ್ದಿದ್ದಳು.
ಮನೆಯಲ್ಲಿದ್ದ ಒಡವೆ, ಹಣ ಯಾವುದು ಕಳ್ಳತನವಾಗಿಲ್ಲ. ಆದರೆ ಯಾರೋ ಪರಿಚಯಸ್ಥರೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.