ಬೆಳಗಾವಿ: ಇಂದು ಕಮಲ ಪಾಳಯದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು , ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಮತ್ತೆ ಅಪ್ಪಿಕೊಂಡಿರುವುದು ಸಾಕಷ್ಟು ಚರ್ಚೆಯಾಗಿವೆ.
ವಿಧಾನಸಭಾ ಚುನಾವಣೆಯಲ್ಲಿ ಕೈಯಿಂದ ಪೈಟ್ ಮಾಡಿ, ಸೋತು ಸುಣ್ಣಾಗಿದ್ದರು. ಇನ್ನೆನ್ನು ನಾಲ್ಕೈದು ತಿಂಗಳಿನಲ್ಲಿ ಲೋಕಸಭೆ ಚುನಾವಣೆ ಎದುರಾಗಲಿದ್ದು, ಹೀಗಾಗಿ ಕಮಲದತ್ತ ವಾಲಿದ್ದಾರೆ. ಆದರೆ, ಶೆಟ್ಟರ ಆಗಮನದಿಂದ ಬಿಜೆಪಿಯ ಲೋಕಸಭೆ ಟಿಕೆಟ್ ಆಕಾಂಕ್ಷಿಗಳ ಲೇಕ್ಕಾಚಾರ ತಲೆಕೆಳಗಾಗಿಸಿದೆ ಎನ್ನುವ ಮಾಹಿತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಲೋಕಸಭೆ ಚುನಾವಣೆಗಾಗಿ ಬಿಜೆಪಿ-ಹೈಕಮಾಂಡ್ ರಣತಂತ್ರ ಹೂಡಿದೆ. ಲಿಂಗಾಯತ ಪ್ರಬಲ ನಾಯಕ ಜಗದೀಶ್ ಶೆಟ್ಟರ್ ಬೆಳಗಾವಿಯಿಂದ ಕಣಕ್ಕೆ ಇಳಿಸುವ ಲೇಕ್ಕಾಚಾರದಲ್ಲಿದೆ ಎನ್ನಲಾಗಿದೆ.
ಬೆಳಗಾವಿಯಿಂದ ಶೆಟ್ಟರ್ ಕಣಕ್ಕೆ?
ಬೆಳಗಾವಿಯ ಹಾಲಿ ಲೋಕಸಭಾ ಸದಸ್ಯೆ ಹಾಗೂ ಜಗದೀಶ್ ಶೆಟ್ಟರ್ ಅವರ ಸಂಬಂಧಿಕರು ಆಗಿರುವ ಮಂಗಳ ಸುರೇಶ್ ಅಂಗಡಿ ಬರುವ ಚುನಾವಣೆಯಲ್ಲಿ ಸ್ರ್ಪಧಿಸಲು ಹಿಂದೇಟು ಹಾಕಿದ್ದಾರೆ. ಹೀಗಾಗಿ ಬಿಜೆಪಿಗೆ ಪ್ರಬಲ ಅಭ್ಯರ್ಥಿ ಅಗತ್ಯ ಇರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಶೆಟ್ಟರ್ ಅವರನ್ನೇ ಬೆಳಗಾವಿಯಿಂದ ಕಣಕ್ಕಿಳಿಸಲು ಬಿಜೆಪಿ ಮುಂದಾಗಿದೆ ಎಂದು ತಿಳಿದುಬಂದಿದೆ.
ಶೆಟ್ಟರ್ ಸ್ರ್ಪಧಿಸಿದರೆ ಮಂಗಳ ಸುರೇಶ್ ಅಂಗಡಿಯವರ ವಿರೋಧವು ಇರುವುದಿಲ್ಲ. ಅಲ್ಲದೆ ತನ್ನ ಭದ್ರ ಕೋಟೆಯಾಗಿರುವ ಬೆಳಗಾವಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಶೆಟ್ಟರ್ ಅವರೇ ಸೂಕ್ತ ಅಭ್ಯರ್ಥಿ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ಹಠಾತ್ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಂಗಳ ಸುರೇಶ್ ಅಂಗಡಿ ಕೆಲವೇ ಸಾವಿರ ಮತಗಳ ಅಂತರದಿಂದ ಗೆದ್ದಿದ್ದರು. ಅಲ್ಲದೆ ಕ್ಷೇತ್ರದಲ್ಲಿ ಅವರು ಸಕ್ರಿಯರಾಗಿಲ್ಲ ಎಂಬ ಆರೋಪವೂ ಇದೆ. ಇದೀಗ ಶೆಟ್ಟರ್ ಬಿಜೆಪಿ ಅಭ್ಯರ್ಥಿಯಾದರೆ ಜಿಲ್ಲೆಯಲ್ಲಿ ಯಾರ ವಿರೋಧವೂ ವ್ಯಕ್ತವಾಗುವುದಿಲ್ಲ. ಕಾಂಗ್ರೆಸ್ಗೆ ಪ್ರಬಲ ಪೈಪೋಟಿ ನೀಡಲು ಅವರೇ ಸೂಕ್ತವಾದ ಅಭ್ಯರ್ಥಿ ಎಂಬ ಕಾರಣಕ್ಕಾಗಿ ಶೆಟ್ಟರ್ಗೆ ಮಣೆ ಹಾಕಲು ಮುಂದಾಗಿದೆ. ಕೆಲ ದಿನಗಳ ಹಿಂದೆ ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದ ಶೆಟ್ಟರ್ ಬಿಜೆಪಿ ಸೇರ್ಪಡೆಚ ವಿಚಾರ ತಿಳಿಸಿದರು.
ಹೀಗಾಗಿ ಬಿಜೆಪಿ ಕೈಕಮಾಂಡ್ ಜತೆ ಒಂದು ಸುತ್ತಿನ ಚರ್ಚೆ ಬಳಿಕ , ಶೆಟ್ಟರ್ ಅವರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ಬೆಳಗಾವಿ ಅಭ್ಯರ್ಥಿಯನ್ನಾಗಿ ಮಾಡಬೇಕು ಎನ್ನುವ ಬೇಡಿಕೆ ಇದೆ, ಇದಕ್ಕೆ ವರಿಷ್ಠರು ಒಪ್ಪಿಗೆಯನ್ನು ಕೊಟ್ಟಿದ್ದರು ಎಂದು ಮಾಹಿತಿ ತಿಳಿದು ಬಂದಿದೆ.