ಮೈಸೂರು: ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಒಡನಾಡಿ ಸಂಸ್ಥೆಯು ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದೆ. ಮುರುಘಾ ಶ್ರೀಗೆ ಹೈಕೋರ್ಟ್ ಶರತ್ತುಬದ್ಧ ಜಾಮೀನು ನೀಡಿದೆ. ಆದರೆ, ಪ್ರಕರಣ ಸುಪ್ರೀಂಕೋರ್ಟ್ ಮೇಟ್ಟಿಲೇರಿದೆ.
ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗು ಸತೀಶ್ ಚಂದ್ರ ಶರ್ಮ ಅವರಿದ್ದ ಪೀಠವು ಜಾಮೀನು ಮಂಜೂರು ಪ್ರಶ್ನಿಸಿ ಸುಪ್ರೀಂಕೋರ್ಟ್ ನಲ್ಲಿ ವಿಶೇಷ ಮೇಲ್ಮನವಿ ಅರ್ಜಿ ಸಲ್ಲಿಸಲಾಗಿತ್ತು. ಹೀಗಾಗಿ ನ್ಯಾಯಪೀಠ ಪ್ರಕರಣ ವಿಚಾರಣೆ ಅಂಗೀಕರಿಸಿದೆ.
ಮುರುಘಾ ಶ್ರೀ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲಾಗಿದೆ. ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಒಡನಾಡಿ ಪರವಾಗಿ ವಕೀಲೆ ಅಪರ್ಣಾ ಭಟ್ ಅವರು ವಾದ ಮಂಡನೆ ಮಾಡಲಿದ್ದಾರೆ.