This is the title of the web page
This is the title of the web page

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ: ಯಡಿಯೂರಪ್ಪ ವಿರುದ್ಧ ಪೋಕ್ಸೋ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಎಫ್ ಐಆರ್ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ಆರೋಪ:  ಯಡಿಯೂರಪ್ಪ ವಿರುದ್ಧ ಪೋಕ್ಸೋ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಎಫ್ ಐಆರ್ ದಾಖಲು

 

ಬೆಂಗಳೂರು:ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಬಿಜೆಪಿಯು ಬಿರುಸಿನ ಚಟುವಟಿಕೆಗಳನ್ನು ನಡೆಸುತ್ತಿದೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಓಡಾಟ ನಡೆಸುತ್ತಿರುವ ಯಡಿಯೂರಪ್ಪ ಅವರಿಗೆ ಈ ಕೇಸು ಸಂಕಷ್ಟ ತಂದೊಡ್ಡಲಿದೆ.

ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ.

ಬಾಲಕಿಯ ತಾಯಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಮತ್ತು 354 (ಎ) ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಕಳೆದ ಫೆಬ್ರವರಿ 2 ರಂದು ಯಡಿಯೂರಪ್ಪ ಬಳಿ ಸಹಾಯ ಕೇಳಲು ಹೋಗಿದ್ದಾಗ ತನ್ನ ಮಗಳು ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ತಾಯಿ ದೂರು ನೀಡಿರುವುದು ಎಫ್‌ಐಆರ್ ನಲ್ಲಿ ಉಲ್ಲೇಖವಾಗಿದೆ.

ವರದಿಯ ಪ್ರಕಾರ ಯಡಿಯೂರಪ್ಪ ಬಾಲಕಿಯನ್ನು ಕೋಣೆಯೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಂತ್ರಸ್ತೆ ಕೊಠಡಿಯಿಂದ ಹೊರಗೆ ಓಡಿ ಬಂದಾಗ, ಆಕೆಯ ತಾಯಿಗೆ ಪ್ರಕರಣ ನಡೆದಿರುವುದು ಗೊತ್ತಾಗಿದೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನ ಅನ್ವಯ ಸದಾಶಿವನಗರ ಠಾಣಾ ಪೊಲೀಸರು ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಫೆಬ್ರವರಿ 2 ರಂದು ಸಹಾಯ ಕೇಳಲು ಹೋಗಿದ್ದಾಗ ತನಗೆ ಲೈಂಗಿಕ ಕಿರುಕುಳ ನೀಡಿದ್ದಾಗಿ ಸಂತ್ರಸ್ತೆಯು ಎಫ್​ಐಆರ್​ನಲ್ಲಿ ಉಲ್ಲೇಖಿಸಿದ್ದಾಳೆ ಎಂದು ತಿಳಿದುಬಂದಿದೆ.

ಸದ್ಯ ಯಡಿಯೂರಪ್ಪ ಅವರಾಗಲಿ, ಅವರ ಕುಟುಂಬಸ್ಥರಾಗಲಿ ಕೇಸಿನ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಅವರ ತಂಡ ಈ ಆರೋಪವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ ಎಂದು ತಿಳಿದುಬಂದಿದೆ.

ಯಡಿಯೂರಪ್ಪನವರ ವಿರುದ್ಧ ದಾಖಲಾದ ದೂರು
ಯಡಿಯೂರಪ್ಪನವರ ವಿರುದ್ಧ ದಾಖಲಾದ ದೂರು
53 ಮಂದಿ ವಿರುದ್ಧ ಮಹಿಳೆ ದೂರು: ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು , ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ದ ಸಂತ್ರಸ್ತೆ ಬಾಲಕಿ ತಾಯಿ ಸದಾಶಿವನಗರ ಠಾಣೆಗೆ ದೂರು ನೀಡಿದ್ದಾರೆ.