ನವದೆಹಲಿ: ಕೇಂದ್ರ ಚುನಾವಣಾ ಆಯೋಗ, ಇಡೀ ದೇಶವೇ ತೀವ್ರ ಕೂತುಹಲದಿಂದ ಕಾಯುತ್ತಿದ್ದ 2024ರ ಲೋಕಸಭೆ ಚುನಾವಣೆಗೆ ಶನಿವಾರ ಮೂಹುರ್ತ ಫಿಕ್ಸ್ ಮಾಡಿದ್ದು, ಏಪ್ರಿಲ್ 19 ರಿಂದ ಒಟ್ಟು 7 ಹಂತಗಳಲ್ಲಿ ಚುನಾವಣೆ ನಡೆಯಲಿದೆ ಮತ್ತು ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ.
ಇಂದು ದೆಹಲಿಯ ವಿಜ್ಞಾನಭವನದಲ್ಲಿ ಹೊಸದಾಗಿ ನೇಮಕಗೊಂಡ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಮತ್ತು ಸುಖಬೀರ್ ಸಿಂಗ್ ಸಂಧು ಅವರೊಂದಿಗೆ ಜಂಟಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು, ನಾವು ಭಾರತೀಯ ಪ್ರಜಾಪ್ರಭುತ್ವದ ಅತಿದೊಡ್ಡ ಹಬ್ಬಕ್ಕೆ ಸಂಪೂರ್ಣವಾಗಿ ಸಿದ್ಧರಾಗಿದ್ದೇವೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಫೇಕ್ ಸುದ್ದಿಗಳ ಮೇಲೂ ತೀವ್ರ ನಿಗಾ ಇಡಲಾಗುವುದು. ಅಭ್ಯರ್ಥಿಗಳನ್ನು ಬಗ್ಗೆ ಮಾತನಾಡಲು ಅವಕಾಶವಿದೆ. ಆದರೆ ಸುಳ್ಳು ಸುದ್ದಿಗಳ ಮೂಲಕ ತೆಗಳಲು ಅವಕಾಶವಿಲ್ಲ ಎಂದು ಹೇಳಿದರು





























