This is the title of the web page
This is the title of the web page

ಚುನಾವಣಾ ಬಾಂಡ್ : ಬಿಜೆಪಿ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿ ಮೋದಿ ಇದಕ್ಕೆ ಉತ್ತರಿಸಲಿ :ಸಿಎಂ ಸಿದ್ದರಾಮಯ್ಯ

ಚುನಾವಣಾ ಬಾಂಡ್  : ಬಿಜೆಪಿ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿ ಮೋದಿ ಇದಕ್ಕೆ ಉತ್ತರಿಸಲಿ :ಸಿಎಂ ಸಿದ್ದರಾಮಯ್ಯ

 

ಬೆಂಗಳೂರು, ಮಾ 16: ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ. ಸುಪ್ರೀಂ ಕೋರ್ಟ್ ಉನ್ನತಾಧಿಕಾರದ ಸಮಿತಿಯನ್ನು ರಚಿಸಿ ಚುನಾವಣಾ ಬಾಂಡ್ ಹಗರಣದ ತನಿಖೆ ನಡೆಸಬೇಕು ಮತ್ತು ಅಲ್ಲಿಯ ವರೆಗೆ ಬಿಜೆಪಿಯ ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಬೇಕು. ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ? ಪ್ರಧಾನಿಯವರೇ ಉತ್ತರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ

ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ ಚುನಾವಣಾ ಬಾಂಡ್ ಸುಲಿಗೆ ಬಗ್ಗೆ ಭಾರತೀಯ ಜನತಾ ಪಕ್ಷ ಯಾಕೆ ಮೌನವಾಗಿದೆ? ಸ್ವಿಸ್ ಬ್ಯಾಂಕ್ ನಲ್ಲಿರುವ ಕಪ್ಪು ಹಣ ತಂದು ಜನರಿಗೆ ಹಂಚುತ್ತೇವೆ, ನೋಟ್ ಬ್ಯಾನ್ ಮಾಡಿ ಕಪ್ಪುಹಣದ ಮೂಲೋತ್ಪಾಟನೆ ಮಾಡುತ್ತೇವೆ, ನಾ ಖಾವೂಂಗಾ – ನಾ ಖಾನೆ ದೂಂಗಾ, ದೇಶದ ಸಂಪತ್ತಿಗೆಲ್ಲ ನಾನೇ ಚೌಕಿದಾರ ಎಂದೆಲ್ಲ ಹೇಳಿ ಹತ್ತು ವರ್ಷಗಳಿಂದ ಅಧಿಕಾರದಲ್ಲಿರುವ ಮೋದಿಯವರೇ ಕನಿಷ್ಠ ಚುನಾವಣಾ ಬಾಂಡ್ ಹಗರಣದ ಬಗ್ಗೆಯಾದರೂ ಉತ್ತರಿಸಿ.

ಸುಪ್ರೀಂ ಕೋರ್ಟ್ ಆದೇಶದ ಹೊರತಾಗಿಯೂ ಭಾರತೀಯ ಸ್ಟೇಟ್ ಬ್ಯಾಂಕ್ ಸಂಪೂರ್ಣ ಮಾಹಿತಿ ನೀಡಲು ಯಾಕೆ ಹಿಂಜರಿಯುತ್ತಿದೆ? ಚುನಾವಣಾ ಬಾಂಡ್ ಗಳ ಮಾರಾಟ ಮತ್ತು ಖರೀದಿ ವ್ಯವಹಾರ ಕಾನೂನುಬದ್ಧವಾಗಿ ನಡೆದಿದ್ದರೆ ಎಸ್‌ಬಿಐ ಯಾಕೆ ಮಾಹಿತಿ ಮುಚ್ಚಿಡಲು ಪ್ರಯತ್ನಿಸುತ್ತಿದೆ? ಎಸ್‌ಬಿಐ ಮೇಲೆ ಒತ್ತಡ ಹೇರುತ್ತಿರುವವರು ಯಾರು? ಪ್ರಧಾನಿ ನರೇಂದ್ರ ಮೋದಿ ಅವರೇ ದಯವಿಟ್ಟು ಉತ್ತರಿಸಿ ಎಂದು ಕೇಳಿದ್ದಾರೆ.

ಮಾಧ್ಯಮಗಳು ವಿಶ್ಲೇಷಿಸುತ್ತಿರುವ ಚುನಾವಣಾ ಆಯೋಗ ಪ್ರಕಟಿಸಿರುವ ಮಾಹಿತಿಯನ್ನು ನೋಡಿದರೆ ಕೇಂದ್ರ ಸರ್ಕಾರ ಉದ್ಯಮಿಗಳ ಬ್ಲಾಕ್ ಮೇಲ್ ಮಾಡುತ್ತಿರುವಂತೆ ಕಾಣುತ್ತಿದೆ. ಉದ್ಯಮಿಗಳ ಮೇಲೆ ನಡೆದಿರುವ ಐಟಿ, ಇಡಿ, ಸಿಬಿಐ ದಾಳಿಗಳ ದಿನಾಂಕ ಮತ್ತು ಆ ಉದ್ಯಮಿಗಳು ಚುನಾವಣಾ ಬಾಂಡ್ ಗಳ ಖರೀದಿ ದಿನಾಂಕಗಳನ್ನು ನೋಡಿದರೆ ಇದೊಂದು ಪಕ್ಕಾ ಬ್ಲಾಕ್ ಮೇಲ್ ಹಗರಣದಂತೆ ಕಾಣುತ್ತಿದೆ. ದೇಣಿಗೆ ವಸೂಲಿಗಾಗಿ ಕೇಂದ್ರ ಸರ್ಕಾರ ತನ್ನ ಅಧೀನದಲ್ಲಿರುವ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆಯೇ? ಎಂದು ಪ್ರಶ್ನಿಸಿದ್ದಾರೆ.