This is the title of the web page
This is the title of the web page

ಲೋಕಸಭೆ ಚುನಾವಣೆ ಬಳಿಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಕಳೆದುಕೊಳ್ಳುತ್ತಾರೆ : ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ತಿರುಗೇಟು

ಲೋಕಸಭೆ ಚುನಾವಣೆ ಬಳಿಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನ ಕಳೆದುಕೊಳ್ಳುತ್ತಾರೆ : ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪ ತಿರುಗೇಟು

 

ನವದೆಹಲಿ ಮಾ20 : ಘೋಷಣೆ ಆಗಿರುವ ಅಭ್ಯರ್ಥಿಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಬಂಡಾಯ ಅಭ್ಯರ್ಥಿಗಳ ಬಗ್ಗೆ ಸಭೆಯಲ್ಲಿ ಯಾವುದೇ ಚರ್ಚೆಯಾಗಿಲ್ಲ. ಲೋಕಸಭೆ ಚುನಾವಣೆ ಬಳಿಕ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟವನ್ನ ಕಳೆದುಕೊಳ್ಳುತ್ತಾರೆ ಎಂದು ಹೇಳಿಕೆ ನೀಡಿದ್ದ ಮಾಜಿ ಸಚಿವ ಕೆ.ಎಸ್​. ಈಶ್ವರಪ್ಪಗೆ ಸ್ವತಃ ಬಿವೈ ವಿಜಯೇಂದ್ರ ಅವರೇ ಟಾಂಗ್ ಕೊಟ್ಟಿದ್ದಾರೆ.

ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಒಂದು ಅವಧಿಗೆ ನನ್ನನ್ನು ನೇಮಕ ಮಾಡಿದ್ದಾರೆ ಅಂತ ಭಾವಿಸುತ್ತೇನೆ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು ಅಷ್ಟೆ” ಎಂದು ತಿಳಿಸಿದರು.

ಮಾರ್ಚ್ 22ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಸಭೆ ನಡೆಯಲಿದ್ದು ಉಳಿದ ಬಾಕಿ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಅಂತಿಮವಾಗಲಿದೆ. ಆ ಬಳಿಕ ಅಭ್ಯರ್ಥಿಗಳ ಹೆಸರು ಘೋಷಣೆಯಾಗಲಿದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

ಯಾವುದೇ ಕ್ಷೇತ್ರದಲ್ಲಿ ಒಮ್ಮತದ ನಿರ್ಧಾರ ಆಗುವುದಿಲ್ಲ. ಆಕಾಂಕ್ಷಿಗಳ ಪಟ್ಟಿ ಬಹಳ ದೊಡ್ಡದಾಗಿದೆ. ಅಭ್ಯರ್ಥಿಗಳ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆದಿದೆ.