ನವದೆಹಲಿ:“ಸ್ವ ಇಚ್ಛೆಯಿಂದ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ರಾಜೀನಾಮೆ ಅಂಗೀಕರಿಸಬೇಕು ಎಂದು ಕೋರುತ್ತೇನೆ” ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.ಲೋಕಸಭಾ ಚುನಾವಣೆಗೆ ಕೆಲ ದಿನಗಳ ಬಾಕಿಯಿರುವಂತೆಯೇ, ಚಿಕ್ಕಬಳ್ಳಾಪುರ ಕ್ಷೇತ್ರದ ಸಂಸದ ಬಿ ಎನ್ ಬಚ್ಚೇಗೌಡ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಮೂರು ದಿನಗಳ ಹಿಂದೆಯೇ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರಿನಲ್ಲಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪಕ್ಷದ ಕಚೇರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
2008ರಲ್ಲಿ ಬಿಜೆಪಿ ಪ್ರಾಥಮಿಕ ಸದಸ್ಯತ್ವ ಪಡೆದು ಶಾಸಕ, ಸಚಿವ, ಸಂಸದನಾಗಿ ಸಾರ್ವಜನಿಕ ಕೆಲಸ ಮಾಡಲು ಅವಕಾಶ ಮಾಡಿಕೊಟ್ಟ ಪಕ್ಷಕ್ಕೆ ಮತ್ತು ಪಕ್ಷದ ಹಿರಿಯ ಮುಖಂಡರಿಗೆ ಧನ್ಯವಾದ ಅರ್ಪಿಸುವುದಾಗಿ ಹೇಳಿದ್ದಾರೆ.
ಕಳೆದ ಬಾರಿ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್‌ನ ವೀರಪ್ಪ ಮೊಯ್ಲಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಸೋಲಿಸಿದ್ದರು. ಈ ಬಾರಿ ಟಿಕೆಟ್ ದೊರಕುವುದಿಲ್ಲ ಎಂಬುದು ಖಚಿತವಾಗುತ್ತಿದ್ದಂತೆ ಬಿ ಎನ್ ಬಚ್ಚೇಗೌಡ ಅವರು ಚುನಾವಣಾ ನಿವೃತ್ತಿ ಘೋಷಿಸಿದ್ದರು. ಪಕ್ಷದ ಸಂಘಟನೆ ಹಾಗೂ ಚಟುವಟಿಕೆಗಳಿಂದ ದೂರ ಉಳಿದಿದ್ದರು.
ಬಿಜೆಪಿ ಒಂದು ಮತೀಯ ಮತ್ತು ಕೋಮುವಾದಿ ಪಕ್ಷ ಎಂದು ಬಿಜೆಪಿ ಸಂಸದ ಬಿಎನ್ ಬಚ್ಚೇಗೌಡ ಅವರು ಶುಕ್ರವಾರ ಸ್ವಪಕ್ಷದ ವಿರುದ್ಧವೇ ತೀವ್ರ ವಾಗ್ದಾಳಿ ನಡೆಸಿದ್ದಾರೆಯ