This is the title of the web page
This is the title of the web page

ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವ ಕಾಪಾಡಲು ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ : ಎಎಪಿ ನಾಯಕ ಗೋಪಾಲ್ ರೈ

ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವ ಕಾಪಾಡಲು ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ : ಎಎಪಿ ನಾಯಕ ಗೋಪಾಲ್ ರೈ

 

ನವದೆಹಲಿ: ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಇದು ಬಿಜೆಪಿ ‘ರಾಜಕೀಯ ಕುತಂತ್ರ’, ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆ-ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು’ ವಿರೋಧ ಪಕ್ಷಗಳ ಇಂಡಿಯಾ ಮೈತ್ರಿಕೂಟ ಮಾರ್ಚ್ 31 ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ ನಡೆಸಲಿದೆ ಎಂದು ಎಎಪಿ ನಾಯಕ ಗೋಪಾಲ್ ರೈ ಭಾನುವಾರ ಹೇಳಿದ್ದಾರೆ.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಇಂಡಿಯಾ ಮೈತ್ರಿಕೂಟದ ಎಎಪಿ ಮತ್ತು ಕಾಂಗ್ರೆಸ್ ನಾಯಕರು ರ್‍ಯಾಲಿಯನ್ನು ಘೋಷಿಸಿದರು.

ಇಂಡಿಯಾ ಮೈತ್ರಿಕೂಟದ ನಾಯಕರ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಅತಿಶಿ ಸಿಂಗ್, ಗೋಪಾಲ್ ರೈ, ಸೌರಭ್ ಭಾರದ್ವಾಜ್ ಹಾಗೂ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಮತ್ತು ಇತರರು.
ದೆಹಲಿ ಸಿಎಂ ಕೇಜ್ರಿವಾಲ್ ಬಂಧನ: ಇದು ಬಿಜೆಪಿ ‘ರಾಜಕೀಯ ಕುತಂತ್ರ’, ಜೈಲಿನಿಂದಲೇ ಅಧಿಕಾರ ನಡೆಸುತ್ತೇವೆ- ಎಎಪಿ
‘ದೇಶದಲ್ಲಿ ಈಗ ಏನಾಗುತ್ತಿದೆಯೋ ಅದರ ವಿರುದ್ಧ ನಾವು ಮಾರ್ಚ್ 31ರಂದು ರಾಮಲೀಲಾ ಮೈದಾನದಲ್ಲಿ ‘ಮಹಾ ರ್‍ಯಾಲಿ’ ನಡೆಸುತ್ತೇವೆ. ಇಂಡಿಯಾ ಮೈತ್ರಿಕೂಟದ ಎಲ್ಲಾ ಪ್ರಮುಖ ನಾಯಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ’ ಎಂದು ಎಎಪಿಯ ದೆಹಲಿ ಸಂಚಾಲಕ ಗೋಪಾಲ್ ರೈ ಹೇಳಿದ್ದಾರೆ.

‘ಪ್ರಜಾಪ್ರಭುತ್ವ ಮತ್ತು ದೇಶವು ಅಪಾಯದಲ್ಲಿದೆ. ಹೀಗಾಗಿ, ಇಂಡಿಯಾ ಮೈತ್ರಿಕೂಟದ ಪಕ್ಷಗಳು ದೇಶದ ಹಿತಾಸಕ್ತಿ ಮತ್ತು ಪ್ರಜಾಪ್ರಭುತ್ವವನ್ನು ಕಾಪಾಡಲು ಈ ‘ಮಹಾ ರ್‍ಯಾಲಿ’ ನಡೆಸಲಿವೆ’ ಎಂದು ರೈ ಹೇಳಿದರು.

ಕಾಂಗ್ರೆಸ್‌ನ ದೆಹಲಿ ಘಟಕದ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ಮಾತನಾಡಿ, ವಿರೋಧ ಪಕ್ಷಗಳಿಗೆ ಸಮಾನ ಅವಕಾಶ ನೀಡುತ್ತಿಲ್ಲ ಮತ್ತು ತಮ್ಮ ಪಕ್ಷದ ಖಾತೆಗಳನ್ನು ಸ್ಥಗಿತಗೊಳಿಸಲಾಗಿದೆ. ವಿಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಳ್ಳಲಾಗುತ್ತಿದೆ. ಮುಖ್ಯಮಂತ್ರಿಯೊಬ್ಬರನ್ನು ಬಂಧಿಸಲಾಗಿದೆ ಎಂದರು.

ಇಂಡಿಯಾ ಮೈತ್ರಿಕೂಟದ ನಾಯಕರ ಪತ್ರಿಕಾಗೋಷ್ಠಿಯಲ್ಲಿ ಎಎಪಿಯ ಅತಿಶಿ ಸಿಂಗ್, ಗೋಪಾಲ್ ರೈ, ಸೌರಭ್ ಭಾರದ್ವಾಜ್ ಹಾಗೂ ದೆಹಲಿ ಕಾಂಗ್ರೆಸ್ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ಮತ್ತು ಇತರರು