ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ : ರಾಹುಲ್‌ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ

 ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ : ರಾಹುಲ್‌ ಗಾಂಧಿ  ಬಿಜೆಪಿ ವಿರುದ್ಧ ಆಕ್ರೋಶ

 

ಹೈದರಾಬಾದ್‌:ಪ್ರಧಾನಿ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿದ್ದಾರೆ : ರಾಹುಲ್‌ ಗಾಂಧಿ ಬಿಜೆಪಿ ವಿರುದ್ಧ ಆಕ್ರೋಶ ಕಾಂಗ್ರೆಸ್‌ ಪಕ್ಷದ ಪ್ರಣಾ ಳಿಕೆಯು ಭಾರತೀಯ ಧ್ವನಿಯಾಗಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹೇಳಿ ದ್ದಾರೆ. ಹೈದರಾಬಾದ್‌ನಲ್ಲಿ ಆಯೋಜಿ ಸಲಾಗಿದ್ದ ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು ಪ್ರಧಾನಿ ಯಾದ ಬಳಿಕ ಕೋಟ್ಯಂತರ ಜನರು ಭಾರತ ದಲ್ಲಿ ಬಡವರಾಗಿದ್ದಾರೆ ಎಂದು ಅವರು ಆರೋಪಿಸಿದರು.

ಬಿಜೆಪಿ ನೇತೃತ್ವದ ಎನ್‌ಡಿಎ ಸರಕಾರದ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ ಕಾಂಗ್ರೆಸ್‌ ನಾಯಕ, ದೇಶದಲ್ಲಿ ನಿತ್ಯ 30 ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.ಆದರೆ ಮೋದಿ ರೈತರ ಸಾಲಮನ್ನಾ ಮಾಡದೇ, ಶ್ರೀಮಂತರ 16 ಲಕ್ಷ ಕೋಟಿ ರೂ. ಸಾಲ ಮನ್ನಾ ಮಾಡಿ ದ್ದಾರೆ ಎಂದು ಹೇಳಿದರು.

ಒಂದು ವೇಳೆ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಕಿಸಾನ್‌ ನ್ಯಾಯದಡಿ ರೈತರ ಸಾಲಮನ್ನಾ ಮಾಡಲಾಗುವುದು ಮತ್ತು ಕನಿಷ್ಠ ಬೆಂಬಲ ಬೆಲೆಗೆ ಕಾನೂನು ಮಾನ್ಯತೆ ದೊರಕಿಸಿಕೊಡಲಾಗುವುದು ಎಂದು ಹೇಳಿದರು.