ಬೆಳಗಾವಿ : ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಪಂಚಮಸಾಲಿ ಸಮಾಜವನ್ನು ವಿರೋಧ ಕಟ್ಟಿಕೊಂಡು ಚುನಾವಣೆಗೆ ಹೋಗಿತ್ತು. ಅದರ ಪರಿಣಾಮ ವಿಧಾನಸಭಾ ಚುನಾವಣೆಯಲ್ಲಿ ಸೋಲು ಕಂಡಿದ್ದನ್ನು ಇನ್ನು ಬಿಜೆಪಿ ಮರೆತಿಲ್ಲ ಮತ್ತೆ ಅದೇ ತಪ್ಪನ್ನು ಬಿಜೆಪಿ ಮುಖಂಡರು ಪಂಚಮಸಾಲಿ ಸಮುದಾಯಕ್ಕೆ ಮಾಡುತ್ತಿರುವುದು ಲೋಕಸಭಾ ಚುನಾವಣೆಯಲ್ಲಿ ಯಾವ ರೀತಿ ಪರಿಣಾಮ ಬೀರುವುದು ಎಂಬ ಕಾದ ನೋಡಬೇಕಾಗಿದೆ.
ಕೂಡಲ ಸಂಗಮ ಪಂಚಮಸಾಲಿ ಸಮಾಜದ ಶ್ರೀ ಬಸವ ಜಯಮೃತ್ಯುಂಜಯ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ ತಂತ್ರ ಹಾಗೂ ನಮ್ಮ ಸಮಾಜದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹಗುರವಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ ನಿರಾಣಿ ಹೇಳಿಕೆ ನೀಡಿರುವುದನ್ನು ಖಂಡಿಸಿ ಶುಕ್ರವಾರ ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜದ ಜಿಲ್ಲಾ ಮುಖಂಡರು ಪ್ರತಿಭಟನೆ ನಡೆಸಿ ನಿರಾಣಿ ಫೋಟೋ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದರು.