This is the title of the web page
This is the title of the web page

ಸಂಜಯ ಪಾಟೀಲ ಹೇಳಿಕೆ ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ :  ಬಿಜೆಪಿ ಜನರಿಗೆ ಬರೀ ಸುಳ್ಳು ಹೇಳುವುದು ಬಿಜೆಪಿಯ ಅಜೆಂಡಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಸಂಜಯ ಪಾಟೀಲ ಹೇಳಿಕೆ ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ :  ಬಿಜೆಪಿ ಜನರಿಗೆ ಬರೀ ಸುಳ್ಳು ಹೇಳುವುದು ಬಿಜೆಪಿಯ ಅಜೆಂಡಾ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

 

ಬೆಳಗಾವಿ: ಬಿಜೆಪಿಯ ಮನಸ್ಥಿತಿ ಬಗ್ಗೆ ಜನರಿಗೆ ಗೊತ್ತಾಗಿದೆ. ಬರೀ ಸುಳ್ಳು ಹೇಳುವುದು ಬಿಜೆಪಿಯ ಅಜೆಂಡಾವಾಗಿದೆ ಎಂದರು ತಮ್ಮ ಕುರಿತು ಸಂಜಯ ಪಾಟೀಲ ವಿವಾದಾತ್ಮಕ ಹೇಳಿಕೆ ನೀಡಿದ ವಿಚಾರವನ್ನು ಜಾತಿ ಅಸ್ತ್ರವಾಗಿ ತಿರುಗಿಸಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಲಿಂಗಾಯತ ಸಮಾಜಕ್ಕೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮಹಿಳೆಯರನ್ನು ನಾನು ಪ್ರತಿನಿಧಿಸುತ್ತೇನೆ‌. ನಾಲಿಗೆ ಮೇಲೆ ಹಿಡಿತ ಇರಬೇಕು, ವೇದಿಕೆ ಮೇಲೆ ಇದ್ದವರು ಯಾಕೆ ತಡೆಯಲ್ಲ. ಸಂಜಯ್ ಪಾಟೀಲ್ ಮೂಲಕ ಮಾತನಾಡಿಸಿದ್ದಾರಾ? ಇದು ನನಗೆ ಅಲ್ಲ ಇಡೀ ಸ್ತ್ರೀ ಕುಲಕ್ಕೆ ಮಾಡಿದ ಅವಮಾನ. ನಾನು ಲಿಂಗಾಯತ ಸಮಾಜದ ಹೆಣ್ಣು ಮಗಳು. ಲಿಂಗಾಯತ ಸಮಾಜಕ್ಕೆ ಮಾಡಿದ ಅವಮಾನ ಎಂದಿದ್ದಾರೆ.ಇದನ್ನು ಧಿಕ್ಕರಿಸಲು ಇಡೀ ರಾಜ್ಯದ ಮಹಿಳೆಯರಿಗೆ ಕರೆ ಕೊಡುತ್ತೇನೆ. ಮಹಿಳೆಯ ಆತ್ಮಗೌರವಕ್ಕೆ ಧಕ್ಕೆಯಾಗಿದೆ. ಮಹಿಳೆಯರ ಸಬಲೀಕರಣ ವಿರೋಧಿಗಳು ಬಿಜೆಪಿಯವರು. ಗ್ಯಾರಂಟಿ ಯೋಜನೆಯ ಬಗ್ಗೆಯೂ ವಿರೋಧ ಮಾಡುತ್ತಾರೆ ಎಂದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆಯಾಗಿ ಹೇಳ್ತೀನಿ. ಹಳ್ಳಿಯ ಹೆಣ್ಣು ಮಗಳ ಬಗ್ಗೆ ಯಾಕೆ ಇಷ್ಟು ಹಗರುವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಯಾವುದೇ ಸ್ವಾರ್ಥಕ್ಕಾಗಿ ಯೋಜನೆ ಮಾಡಿಲ್ಲ.