ಕೊಡಗು: ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯ ಷಡ್ಯಂತ್ರ ಎಂದು ಕೇಂದ್ರ ಸಚಿವರೇ ಬಹಿರಂಗವಾಗಿ ಹೇಳಿದ್ದಾರೆ ದೇಶದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಪ್ರತಿಪಾದಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ನೀಡಿ ಸಂವಿಧಾನ ಉಳಿಸಿ ಎಂದು ಜನತೆಯಲ್ಲಿ ಮನವಿ ಮಾಡಿದ್ದಾರೆ.
ಮಡಿಕೇರಿಯಲ್ಲಿ ‘ಜನಧ್ವನಿ-2’ ಚುನಾವಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಪ್ರಜಾಪ್ರಭುತ್ವ ಅಪಾಯದಲ್ಲಿದೆ. ಸಂವಿಧಾನ ಉಳಿಸುವ ಬಾಧ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೆ ಸಿಕ್ಕ ಅವಕಾಶವಾಗಿದೆ. ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು ಎಂದು ಹೇಳಿದರು
“ಸಂವಿಧಾನ ಅಪಾಯದಲ್ಲಿದೆ ಎಂದರೆ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು ಮತ್ತು ದೇಶದ ಶ್ರಮಜೀವಿಗಳ ಜೀವನ ಮತ್ತು ಭವಿಷ್ಯಕ್ಕೆ ಅಪಾಯ” ಎಂದರ್ಥ. ಬಿಜೆಪಿ ಸಂವಿಧಾನ ವಿರೋಧಿಯಾಗಿದ್ದು, ಸಂವಿಧಾನ ಬದಲಾವಣೆ ಮಾಡುವುದು ಬಿಜೆಪಿಯ ಷಡ್ಯಂತ್ರ ಎಂದು ಕೇಂದ್ರ ಸಚಿವರೇ ಬಹಿರಂಗವಾಗಿ ಹೇಳಿದ್ದಾರೆ ಮುಂಬರುವ ಲೋಕಸಭೆ ಚುನಾವಣೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಸೋಲಿಸುವ ಮೂಲಕ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯುವ ಅವಕಾಶವನ್ನು ನಾಗರಿಕರು ಬಳಸಿಕೊಳ್ಳಬೇಕು ಎಂದರು
ಸಂವಿಧಾನ ರಚನಾ ಸಭೆಯಲ್ಲಿ ಸಂವಿಧಾನ ವಿರೋಧಿಗಳ ವಿರುದ್ಧ ಡಾ.ಬಿ.ಆರ್.ಅಂಬೇಡ್ಕರ್ ಅವರ ಎಚ್ಚರಿಕೆಯ ಮಾತುಗಳನ್ನು ಪ್ರಸ್ತಾಪಿಸಿದ ಮುಖ್ಯಮಂತ್ರಿ, ‘ಸಮಾಜದ ಎಲ್ಲ ಜಾತಿ, ವರ್ಗ ಮತ್ತು ಧರ್ಮದ ಬಡವರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣಕ್ಕಾಗಿ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ. ಹತ್ತು ವರ್ಷಗಳಲ್ಲಿ ಪ್ರಧಾನಿಯಾಗಿ ಮೋದಿ ಒಂದಾದರೂ ಭರವಸೆಯನ್ನು ಈಡೇರಿಸಿದ್ದಾರೆಯೇ ಎಂದು ಹೃದಯದ ಮೇಲೆ ಕೈ ಇಟ್ಟುಕೊಂಡು ಹೇಳಲಿ ಎಂದು ಸಿದ್ದರಾಮಯ್ಯ ಹೇಳಿದರು.