ವಿಜಯಪುರ :ಏ 26 :ಸಂವಿಧಾನದ 15 ಮತ್ತು 16 ನೇ ಕಲಂ ನಲ್ಲಿ ಸ್ಪಷ್ಟವಾಗಿ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಹೇಳಲಾಗಿದೆ. ನರೇಂದ್ರ ಮೋದಿಯವರು ಸುಳ್ಳು ಹೇಳುವುದರಲ್ಲಿ ಪ್ರವೀಣರು. ಸ್ವತಂತ್ರ ಭಾರತದಲ್ಲಿ ಆಗಿ ಹೋದ ಪ್ರಧಾನಮಂತ್ರಿಗಳ ಪೈಕಿ ಅತಿ ಹೆಚ್ಚು ಸುಳ್ಳು ಹೇಳುವುದು ನರೇಂದ್ರ ಮೋದಿಯವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು
ನರೇಂದ್ರ ಮೋದಿಯವರು ಹತ್ತು ವರ್ಷ ಪ್ರಧಾನಿಯಾಗಿ ಬಡವರು, ಯುವಕರು,ದಲಿತರು ಅಲ್ಪಸಂಖ್ಯಾತ ಪರವಾಗಿ ಕೆಲಸ ಮಾಡಿಲ್ಲ. ಬೆಲೆಯೇರಿಕೆ, ನಿರುದ್ಯೋಗ, ರೈತರ ಸಂಸ್ಥೆಗಳ ಬಗ್ಗೆ ಪ್ರಧಾನಿಗಳು ಚರ್ಚೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ನರೇಂದ್ರ ಮೋದಿಯವರು ಸಾಧನೆಗಳನ್ನು ಹೇಳದೆ ಭಾವನೆಗಳನ್ನು ಕೆರಳಿಸಿ, ಧರ್ಮ ಧರ್ಮಗಳ ನಡುವೆ, ಜಾತಿಗಳ ನಡುವೆ ಬೆಂಕಿ ಇಡುವ ಕೆಲಸಗಳನ್ನು ಮಾಡಿದ್ದಾರೆ. ಇತ್ತೀಚಿನ ಅವರ ಭಾಷಣಗಳನ್ನು ಗಮನಿಸಿದರೆ ಮೊದಲಹಂತದ ಚುನಾವಣೆಯಲ್ಲಿ ಅವರು ನಿರೀಕ್ಷಿಸಿದ ಮತಗಳು ಬರುವುದಿಲ್ಲ ಎಂದು ಅವರು ಹತಾಶರಾಗಿದ್ದಾರೆ. ಸಂಬಂಧಪಡದ ಅನೇಕ ವಿಚಾರಗಳನ್ನು ಪ್ರಸ್ತಾಪಿಸುತ್ತಿದ್ದಾರೆ ಎಂದರು.
ಅದರಲ್ಲಿ ಹಿಂದೂಗಳು ಹಾಗೂ ಮುಸಲ್ಮಾನರು, ಕ್ರಿಶ್ಚಿಯನ್ ಹಾಗೂ ಎಲ್ಲಾ ಜನರೂ ಬರುತ್ತಾರೆ. ಮುಸಲ್ಮಾನರಿಗೆ ಮೀಸಲಾತಿ ಕೊಡಲಾಗುವುದಿಲ್ಲ ಎಂದು ಹೇಳಲು ಸಾಧ್ಯವಿಲ್ಲ. ಅವರು ಸಂವಿಧಾನದ ವಿರುದ್ಧವಾಗಿ ಮಾತನಾಡುತ್ತಿದ್ದಾರೆ. ಹಿಂದೂಗಳ ಮೀಸಲಾತಿಯನ್ನು ಕಿತ್ತು ಮುಸಲ್ಮಾನರಿಗೆ ಕೊಡುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ.